ಚಾಮರಾಜನಗರ: ಆಷಾಡ ಮಾಸದ ಕಡೆಯ ಶುಕ್ರವಾರದಂದು ಜಿಲ್ಲೆಯಾದ್ಯಂತ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನಡೆಯಿತು. ಪ್ರಮುಕವಾಗಿ ದೇವಿಯರ ದೇಗುಲಗಳಲ್ಲಿ ಭಕ್ತರ ದಟ್ಟಣೆ ಹೆಚ್ಚಾಗಿತ್ತು.
ನಗರದ ಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿರುವ ಚಾಮುಂಡೇಶ್ವರಿ ಗುಡಿಯಲ್ಲಿ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು. ಕಾಳಿಕಾಂಬಾ ಕಮಠೇಶ್ವರ ಸ್ವಾಮಿ ದೇವಸ್ಥಾನದಲ್ಲಿ ದೇವಿಗೆ ಗಜಲಕ್ಷ್ಮೀ ಹಾಗೂ ಬಳೆಯ ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಲಾಯಿತು. ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಕಡೆ ಆಷಾಢ ಹಿನ್ನೆಲೆಯಲ್ಲಿ ದೇವಸ್ಥಾನವನ್ನು ಅಲಂಕೃತಗೊಳಿಸಲಾಗಿತ್ತು. ಸಂಜೆ ದೇವರಿಗೆ ಪಂಚಾಮೃತ ಅಭಿಷೇಕ, ಕುಂಕುಮಾರ್ಚನೆ ಹಾಗೂ ವಿವಿಧ ಪೂಜೆಗಳನ್ನು ನೇರವೇರಿಸಲಾಯಿತು. ಬಳಿಕ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಯಿತು.
ಗ್ರಾಮಾಂತರ ಭಾಗಗಳಿಂದಲೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ನಿಂಬೆಹಣ್ಣಿನ ದೀಪ, ತುಪ್ಪದ ದೀಪ ಹಚ್ಚಿ ಇಷ್ಠಾರ್ಥ ಸಿದ್ದಿಗೆ ಪ್ರಾರ್ಥಿಸಿದರು. ಪ್ರಸಾದ ವಿತರಣೆ ಮಾಡಲಾಯಿತು. ಸಂಜೆ ಕಾಳಿಕಾಂಬ ಸಮೇತ ಕಮಠೇಶ್ವರ ಸ್ವಾಮಿ ಉತ್ಸವ ಮೂರ್ತಿ ಮೆರವಣಿಗೆ ನಡೆಯಿತು. ಕಾಳಿಕಾಂಬಾ ಭಜನ ಮಂಡಳಿಯಿಂದ ಲಲಿತಾ ಸಹಸ್ರ ನಾಮ ಹಾಗೂ ನಂಜನಗೂಡು ಭಜನಾ ತಂಡದಿಂದ ದೇವರ ನಾಮ ಸ್ಮರಣೆ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.