ADVERTISEMENT

ಚಾಮರಾಜನಗರ: ಜಿಲ್ಲೆಯಾದ್ಯಂತ 76ನೇ ಸ್ವಾತಂತ್ರ್ಯೋತ್ಸವ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2022, 4:13 IST
Last Updated 15 ಆಗಸ್ಟ್ 2022, 4:13 IST
ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಧ್ವಜಾರೋಹಣ ನೆರವೇರಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಧ್ವಜಾರೋಹಣ ನೆರವೇರಿಸಿದರು.   

ಚಾಮರಾಜನಗರ: ಜಿಲ್ಲೆಯಾದ್ಯಂತ 76ನೇ ಸ್ವಾತಂತ್ರ್ಯೋತ್ಸವ ಸಂಭ್ರಮ ಮನೆ ಮಾಡಿದೆ.

ನಗರದ ಡಾ.ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಪ್ರಧಾನ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಧ್ವಜಾರೋಹಣ ನೆರವೇರಿಸಿದರು.

ಕ್ರೀಡಾಂಗಣದ ಸುತ್ತ ತೆರೆದ ವಾಹನದಲ್ಲಿ ಸಾಗಿದ ಸಚಿವರು, ಪೊಲೀಸ್, ಅರಣ್ಯ, ಗೃಹರಕ್ಷಕ ದಳ, ಅಬಕಾರಿ, ಎನ್ ಸಿಸಿ ಸೇರಿದಂತೆ ವಿವಿಧ ತುಕಡಿಗಳ ಪರಿವೀಕ್ಷಣೆ ಮಾಡಿದರು.

ADVERTISEMENT

24 ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು. ಸಾವಿರಾರು ಜನರ ಸಮ್ಮುಖದಲ್ಲಿ ನಡೆದ ಆಕರ್ಷಕ ಪಥಸಂಚಲನ ಗಮನಸೆಳೆಯಿತು.

ಶಾಸಕ ಸಿ.ಪುಟ್ಟರಂಗಶೆಟ್ಟಿ, ಕಾಡಾ ಅಧ್ಯಕ್ಷ ಜಿ.ನಿಜಗುಣರಾಜು, ನಗರಸಭೆ ಅಧ್ಯಕ್ಷೆ ಸಿ.ಎಂ.ಆಶಾ, ಜಿಲ್ಲಾಧಿಕಾರಿ‌ ಚಾರುಲತಾ ಸೋಮಲ್, ಜಿ.ಪಂ ಸಿಇಒ ಕೆ.ಎಂ.ಗಾಯಿತ್ರಿ ಸೇರಿದಂತೆ ವಿವಿಧ ಅಧಿಕಾರಿಗಳು, ನಗರಸಭಾ ಅಧಿಕಾರಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.