
ಪ್ರಜಾವಾಣಿ ವಾರ್ತೆ
ಹುಲಿ
ಚಾಮರಾಜನಗರ: ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಧಾಮದಲ್ಲಿ ಈಚೆಗೆ ಹುಲಿಯೊಂದನ್ನು ಮೂರು ತುಂಡುಗಳಾಗಿ ಕತ್ತರಿಸಿದ್ದ ಪ್ರಕರಣದಲ್ಲಿ ಬಂಧಿತರಾಗಿದ್ದ ಆರೋಪಿಗಳಿಗೆ ಕೊಳ್ಳೇಗಾಲ ಜೆಎಂಎಫ್‌ಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಆರೋಪಿಗಳಾದ ಪಚ್ಚ ಮಲ್ಲು, ಸಂಪಿಗೆ ಮಾದೇವ, ಸಿದ್ಧರಾಜು ಹಾಗೂ ಗಣೇಶ ಎಂಬುವರಿಗೆ ಜಾಮೀನು ಸಿಕ್ಕಿದೆ. ಹುಲಿ ಕೊಂದ ಆರೋಪದಲ್ಲಿ ಅ.5ರಂದು ಆರೋಪಿಗಳನ್ನು ಬಂಧಿಸಲಾಗಿತ್ತು. ತನಿಖೆ ನಡೆಸಿದ ಅಧಿಕಾರಿಗಳೂ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಕೆ ಮಾಡಲು ತಡ ಮಾಡಿದ್ದರಿಂದ ಆರೋಪಿಗಳ ಜಾಮೀನು ಕೋರಿಕೆ ಅರ್ಜಿಯನ್ನು ನ್ಯಾಯಾಲಯ ಪುರಸ್ಕರಿಸಿದೆ ಎನ್ನಲಾಗಿದೆ.
ಪ್ರಕರಣದಲ್ಲಿ ಭಾಗಿಯಾಗಿರುವ ಪ್ರಮುಖ ಆರೋಪಿ ಗೋವಿಂದ ತಲೆಮರೆಸಿಕೊಂಡಿದ್ದು ಇದುವರೆಗೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.