ADVERTISEMENT

ಗುಂಡ್ಲುಪೇಟೆ: ಕಾಡಂಚಿನಲ್ಲಿ ಕ್ಯಾಮೆರಾ ಕಣ್ಗಾವಲು

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2025, 23:37 IST
Last Updated 21 ನವೆಂಬರ್ 2025, 23:37 IST
<div class="paragraphs"><p>ಗುಂಡ್ಲುಪೇಟೆ ತಾಲ್ಲೂಕು ವ್ಯಾಪ್ತಿಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ ಅಂಚಿನಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಸಿರುವುದು&nbsp;</p></div>

ಗುಂಡ್ಲುಪೇಟೆ ತಾಲ್ಲೂಕು ವ್ಯಾಪ್ತಿಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ ಅಂಚಿನಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಸಿರುವುದು 

   

ಗುಂಡ್ಲುಪೇಟೆ (ಚಾಮರಾಜನಗರ ಜಿಲ್ಲೆ): ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ವಾಹನಗಳನ್ನು ನಿಲ್ಲಿಸಿ ವನ್ಯಜೀವಿಗಳಿಗೆ ತೊಂದರೆ ನೀಡುವವರ ಮೇಲೆ ನಿಗಾ ಇರಿಸಲು ಹೆದ್ದಾರಿಯ ಅಲ್ಲಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸಲಾಗಿದೆ.

ಕಾಡುಪ್ರಾಣಿಗಳ ಫೋಟೊ, ವಿಡಿಯೊ ತೆಗೆಯುವುದು, ವನ್ಯಜೀವಿಗಳ ಮುಕ್ತ ಸಂಚಾರಕ್ಕೆ ಅಡ್ಡಿಪಡಿಸು

ADVERTISEMENT

ವುದು ಹಾಗೂ ಹೆದ್ದಾರಿಯಲ್ಲಿ ಸಂಚಾರಕ್ಕೆ ಧಕ್ಕೆ ಆಗುವುದನ್ನು ತಡೆಯುವುದು, ಚಲನವಲನಗಳನ್ನು ಆಧರಿಸಿ ತಪ್ಪಿತಸ್ಥರ ಮೇಲೆ ದಂಡ ವಿಧಿಸುವುದು ಇದರ ಉದ್ದೇಶ.

ಬಂಡೀಪುರದಿಂದ ಕೆಕ್ಕನಹಳ್ಳ ಚೆಕ್‌ಪೋಸ್ಟ್‌ವರೆಗೆ ಚಾಚಿರುವ ಹೆದ್ದಾರಿಯಲ್ಲಿ 10 ಕಡೆ ಕ್ಯಾಮೆರಾ ಅಳವಡಿಸಲಾಗಿದೆ. ಸೋಲಾರ್ ಆಧಾರಿತ ಕ್ಯಾಮೆರಾಗಳನ್ನು

ಅಳವಡಿಸಿರುವುದರಿಂದ ವಿದ್ಯುತ್ ಸಂಪರ್ಕದ ಅಗತ್ಯವಿಲ್ಲ. ದಿನದ 24 ತಾಸು ಕಾರ್ಯನಿರ್ವಹಿಸುತ್ತವೆ.

‘ಚಾಲಕರು, ಸವಾರರು ಅರಣ್ಯ ವ್ಯಾಪ್ತಿಯಲ್ಲಿ ವಾಹನಗಳನ್ನು ನಿಲುಗಡೆ ಮಾಡಿ ಪ್ರಾಣಿಗಳಿಗೆ ಆಹಾರ ನೀಡುವುದು, ಅನುಚಿತವಾಗಿ ವರ್ತಿಸುವುದರ ಮೇಲೆ ನಿಗಾ ಇಡಲಾಗುತ್ತದೆ. ಫೋಟೊ ಹಾಗೂ ವಿಡಿಯೊ ಸೆರೆ ಆಗಲಿದ್ದು, ಸಾರ್ವಜನಿಕರ ವರ್ತನೆಗಳನ್ನು ಕಚೇರಿಯಲ್ಲಿಯೇ ಕುಳಿತು ವೀಕ್ಷಣೆ ಮಾಡಬಹುದು. ನೆಟ್‌ವರ್ಕ್ ಸಮಸ್ಯೆ ಇದ್ದಾಗ ಮುದ್ರಿತ ದೃಶ್ಯಾವಳಿಗಳನ್ನು ಪರಿಶೀಲಿಸಿ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಕ್ರಮ ಜರುಗಿಸ ಲಾಗುವುದು’ ಎಂದು ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರನ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.