
ಪ್ರಜಾವಾಣಿ ವಾರ್ತೆ
ಬಂಡೀಪುರ ಅರಣ್ಯ
ಚಾಮರಾಜನಗರ: ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಮಾನವ ಪ್ರಾಣಿ ಸಂಘರ್ಷ ತಡೆಯಲು ಸಫಾರಿ ಮೇಲೆ ನಿರ್ಬಂಧ ಹೇರಬೇಕು ಎಂಬ ರೈತ ಸಂಘಟನೆಗಳ ಒತ್ತಾಯದ ಹಿನ್ನೆಲೆಯಲ್ಲಿ ಬಂಡೀಪುರ ಅರಣ್ಯದಲ್ಲಿ 2 ಸಫಾರಿ ಟ್ರಿಪ್‌ಗಳನ್ನು ಕಡಿತಗೊಳಿಸಲು ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ಆದೇಶಿಸಿದ್ದಾರೆ.
ಬಂಡೀಪುರದಲ್ಲಿ ಸಂಜೆ 5 ರಿಂದ 6.30ರ ಅವಧಿಯ ಕೊನೆಯ ಬಸ್ ಸಫಾರಿ ಹಾಗೂ ಹಾಗೂ ಸಂಜೆ 4.30ರಿಂದ 6.30ರ ಅವಧಿಯಲ್ಲಿ ಪ್ರವಾಸಿಗರನ್ನು ಕರೆದೊಯ್ಯುವ ಜೀಪ್ ಸಫಾರಿ ಟ್ರಿಪ್‌ಗಳನ್ನು ರದ್ದು ಮಾಡುವಂತೆ ಸಚಿವರು ನಿರ್ದೇಶನ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.