ADVERTISEMENT

ಬಂಡೀಪುರ ಅಭಯಾರಣ್ಯ: ಹುಲಿಯ ಕಳೆಬರ ಪತ್ತೆ

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2025, 14:51 IST
Last Updated 28 ಏಪ್ರಿಲ್ 2025, 14:51 IST
<div class="paragraphs"><p>ಹುಲಿಯ ಕಳೆಬರ</p></div>

ಹುಲಿಯ ಕಳೆಬರ

   

ಗುಂಡ್ಲುಪೇಟೆ (ಚಾಮರಾಜನಗರ ಜಿಲ್ಲೆ): ತಾಲ್ಲೂಕಿನ ಬಂಡೀಪುರ ಅಭಯಾರಣ್ಯದ ಓಂಕಾರ ವಲಯ ವ್ಯಾಪ್ತಿಯ ಶ್ರೀಕಂಠಪುರ ಗುಡ್ಡದಲ್ಲಿ ಹುಲಿಯ ಕಳೆಬರ ಪತ್ತೆಯಾಗಿದೆ.

8 ರಿಂದ 9 ವರ್ಷದ ಗಂಡು ಹುಲಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ದೊರೆತಿದ್ದು ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರನ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುರೇಶ್, ಓಂಕಾರ ವಲಯ ಅರಣ್ಯಾಧಿಕಾರಿ ಸತೀಶ್ ಕುಮಾರ್ ಹಾಗೂ ಇತರೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ADVERTISEMENT

ಪಶು ವೈದ್ಯಾಧಿಕಾರಿ ಡಾ.ಮುಜೀಬ್ ಮರಣೋತ್ತರ ಪರೀಕ್ಷೆ ನಡೆಸಿದ್ದು, ದೇಹದ ಮೇಲೆ ಯಾವುದೇ ಗಾಯದ ಗುರುತುಗಳು ಪತ್ತೆಯಾಗಿಲ್ಲ. ವಯೋಸಹಜವಾಗಿ ಹುಲಿ ಮೃತಪಟ್ಟಿದೆ ಎಂದು ದೃಢಪಡಿಸಿದ್ದಾರೆ. ಅರಣ್ಯ ಇಲಾಖೆಯ ನಿಯಮಾನುಸಾರ ಕಳೆಬರವನ್ನು ಅರಣ್ಯದಲ್ಲಿ ಸುಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.