ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯ ವ್ಯಾಪ್ತಿಯ ಹೆಗ್ಗವಾಡಿ ರಸ್ತೆಯಲ್ಲಿ ಶುಕ್ರವಾರ ಗಾಯಗೊಂಡು ನಿತ್ರಾಣ ಸ್ಥಿತಿಯಲ್ಲಿದ್ದ ಹುಲಿ
ಗುಂಡ್ಲುಪೇಟೆ (ಚಾಮರಾಜನಗರ ಜಿಲ್ಲೆ): ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆಗ್ಗವಾಡಿ ರಸ್ತೆಯಲ್ಲಿ ಶುಕ್ರವಾರ ಕಾದಾಟದಲ್ಲಿ ಗಂಭೀರವಾಗಿ ಗಾಯಗೊಂಡು ನಿತ್ರಾಣ ಸ್ಥಿತಿಯಲ್ಲಿದ್ದ ಹುಲಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ರಕ್ಷಿಸಿದ್ದಾರೆ.
11 ವರ್ಷದ ಹುಲಿ ಗಂಭೀರವಾಗಿ ಗಾಯಗೊಂಡು ಮಹದೇವ್ ಎಂಬ ರೈತರ ಜಮೀನಿನಲ್ಲಿ ಬಿದ್ದಿತ್ತು.
ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರನ್, ಎಸಿಎಫ್ ಸುರೇಶ್ ಹಾಗೂ ಕುಂದಕೆರೆ ಆರ್‌ಎಫ್‌ಒ ನಾಗೇಂದ್ರ ನಾಯಕ್ ಸ್ಥಳಕ್ಕೆ ಭೇಟಿ ನೀಡಿದ್ದರು. ವೈದ್ಯ ಡಾ.ವಾಸೀಂ ಮಿರ್ಜಾ
ಅರಿವಳಿಕೆ ಲಸಿಕೆ ನೀಡಿದ್ದು, ಬಳಿಕ ಮೈಸೂರಿನ ಪುನರ್ವಸತಿ ಕೇಂದ್ರಕ್ಕೆ ಕಳುಹಿಸಿದರು.
‘ಹುಲಿಯೊಂದಿಗೆ ಕಾದಾಡಿದ್ದ ಹುಲಿ ಸೆರೆ ಹಿಡಿಯಬೇಕು. ಅಲ್ಲಿಯವರೆಗೂ ಗಾಯಾಳು ಹುಲಿ ಸಾಗಿಸಬಾರದು’ ಎಂದು ರೈತರು ಪಟ್ಟು ಹಿಡಿದಿದ್ದರು. ಅಧಿಕಾರಿಗಳು ಭರವಸೆ ನೀಡಿದ ಬಳಿಕ ಅವಕಾಶ ನೀಡಿದರು. ಕುನ್ನಮುಟ್ಟಿ ಗುಡ್ಡದಲ್ಲಿ ಹುಲಿ ಸೆರೆಗೆ ಕಾರ್ಯಾಚರಣೆ ನಡೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.