ಶಾಹುಲ್ ಹಮೀದ್
ಗುಂಡ್ಲುಪೇಟೆ (ಚಾಮರಾಜನಗರ ಜಿಲ್ಲೆ): ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಡಾನೆಯ ಮುಂದೆ ಪುಂಡಾಟ ಪ್ರದರ್ಶಿಸಿದ ಶಾಹುಲ್ ಹಮೀದ್ ಎಂಬಾತನಿಗೆ ಅರಣ್ಯ ಇಲಾಖೆ ಅಧಿಕಾರಿಗಳು ₹25,000 ದಂಡ ವಿಧಿಸಿ ಎಚ್ಚರಿಕೆ ನೀಡಿದ್ದಾರೆ.
ಆರೋಪಿಯು ಈಚೆಗೆ ಬಂಡಿಪುರ ಹುಲಿ ಸಂರಕ್ಷಿತ ಅರಣ್ಯದೊಳಗೆ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನವನ್ನು ನಿಲ್ಲಿಸಿಕೊಂಡು ಪುಂಡಾಟ ನಡೆಸಿದ್ದ. ಆನೆಯ ಮುಂದೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಜೋರು ಶಬ್ದ ಮಾಡುವ ಮೂಲಕ ವನ್ಯಜೀವಿಗಳನ್ನು ಕೆರಳಿಸುವ ಯತ್ನ ನಡೆಸಿದ್ದ. ಆರೋಪಿಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸುದ್ದಿಯಾಗಿ ಪರಿಸರ ಪ್ರೇಮಿಗಳಿಂದ ಖಂಡನೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಶಾಹುಲ್‌ಗೆ ದಂಡ ವಿಧಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.