ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಕಾಡಂಚಿನ ಮಂಗಲ ಗ್ರಾಮದಲ್ಲಿ ಭಾರತೀಯ ಕಿಸಾನ್ ಸಂಘದ ಗ್ರಾಮ ಸಮಿತಿಯನ್ನು ಉದ್ಘಾಟನೆ ಮಾಡಲಾಯಿತು.
ಭಾರತೀಯ ಕಿಸಾನ್ ಸಂಘದ ಗ್ರಾಮ ಸಮಿತಿ ನಾಮಫಲಕ ಉದ್ಘಾಟಿಸಿ ಮಾತನಾಡಿದ ತಾಲ್ಲೂಕು ಘಟಕದ ಅಧ್ಯಕ್ಷ ಮಹದೇವಸ್ವಾಮಿ ಕೊಡಸೋಗೆ, ‘ಗ್ರಾಮೀಣ ಭಾಗದಲ್ಲಿ ರೈತರಿಗೆ ಉತ್ತೇಜನ ನೀಡುವ ಉದ್ದೇಶದಿಂದ ಭಾರತೀಯ ಕಿಸಾನ್ ಸಂಘವನ್ನು ಕಾಡಂಚಿನ ಗ್ರಾಮದಲ್ಲಿ ಉದ್ಘಾಟನೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಸಂಘದವನ್ನು ಮತ್ತಷ್ಟು ಬಲಗೊಳಿಸುವ ಜೊತೆಗೆ ರೈತರ ಸಮಸ್ಯೆಗಳಿಗೆ ಬೆನ್ನೆಲುಬಾಗಿ ನಿಂತು ಹೋರಾಟ ಮಾಡಲಾಗುವುದು’ ಎಂದು ತಿಳಿಸಿದರು.
ಈ ವೇಳೆ ಆರೋಗ್ಯ ಉಚಿತ ತಪಾಸಣೆ ಆಯೋಜಿಸಲಾಗಿತ್ತು.
ಪದಾಧಿಕಾರಿಗಳಾದ ಶಾಂತಪ್ಪ ಶಿಂಡನಪುರ, ವನವಾಸಿ ಮಹೇಶ್, ಪ್ರಕಾಶ್ ಮೊಳ್ಳಯ್ಯನಹುಂಡಿ, ಶಂಕರಪ್ಪ ಕಣ್ಣೆಗಾಲ, ನಾಗೇಶ್, ಗಿರೀಶ್, ಮಹದೇವಪ್ಪ, ಮಂಗಲ ಗ್ರಾ.ಪಂ ಅಧ್ಯಕ್ಷ ವಿಷಕಂಠ, ಸೋಮಶೇಖರ್, ಶಿವಸ್ವಾಮಿ ಸೇರಿದಂತೆ ಸಮಿತಿಯ ನೂತನ ಸದಸ್ಯರು ಹಾಗೂ ಮಂಗಲ ಗ್ರಾಮಸ್ಥರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.