ADVERTISEMENT

ಮಹದೇಶ್ವರ ಬೆಟ್ಟ: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ

₹15 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ: ಶಾಸಕ ಎಂ.ಆರ್ ಮಂಜುನಾಥ್

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2024, 14:37 IST
Last Updated 26 ಡಿಸೆಂಬರ್ 2024, 14:37 IST
ರಸ್ತೆ ಡಾಂಬರೀಕರಣಕ್ಕೆ ಕಾಮಗಾರಿಗೆ ಶಾಸಕ ಎಂ.ಆರ್. ಮಂಜುನಾಥ್ ಭೂಮಿ ಪೂಜೆ ನೆರವೇರಿಸಿದರು
ರಸ್ತೆ ಡಾಂಬರೀಕರಣಕ್ಕೆ ಕಾಮಗಾರಿಗೆ ಶಾಸಕ ಎಂ.ಆರ್. ಮಂಜುನಾಥ್ ಭೂಮಿ ಪೂಜೆ ನೆರವೇರಿಸಿದರು   

ಮಹದೇಶ್ವರ ಬೆಟ್ಟ: ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ರಾಜ್ಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಂ.ಆರ್. ಮಂಜುನಾಥ್ ಭೂಮಿ ಪೂಜೆ ನೆರವೇರಿಸಿದರು.

₹15 ಕೋಟಿ ವೆಚ್ಚದಲ್ಲಿ ಎಲ್ಲೇಮಾಳ, ಕೌದಳ್ಳಿ, ತಾಳುಬೆಟ್ಟ ಮಲೆ ಮಹದೇಶ್ವರ ಬೆಟ್ಟದ ಮುಖ್ಯ ರಸ್ತೆಯ ಮರು ಡಾಂಬರೀಕರಣ ಮಾಡಲಾಗುತ್ತಿದೆ. ಎಲ್ಲೇಮಾಳ ಮುಖ್ಯ ರಸ್ತೆಯಿಂದ ಮಲೆ ಮಹದೇಶ್ವರ ಬೆಟ್ಟದವರೆಗೆ ರಸ್ತೆಗಳು ಗುಂಡಿಬಿದ್ದ ಪರಿಣಾಮ ಅಪಘಾತಗಳು ಸಂಭವಿಸುತ್ತಿತ್ತು. ಇದನ್ನು ತಡೆಯಲು ರಸ್ತೆ ಅಭಿವೃದ್ಧಿ ಮಾಡಲಾಗುತ್ತಿದ್ದು, ಗುಣಮಟ್ಟದ ಕಾಮಗಾರಿ ಮಾಡಬೇಕು ಎಂದು ತಾಕೀತು ಮಾಡಿದರು.

ಚಾಮರಾಜನಗರ ಜಿಲ್ಲೆ ಅಭಿವೃದ್ಧಿಯಲ್ಲಿ ಬಹಳ ಹಿಂದುಳಿದ್ದು ನಂಜುಂಡಪ್ಪ ವರದಿ ಆಧಾರದ ಮೇಲೆ ಕ್ಷೇತ್ರ ಹಾಗೂ ಜಿಲ್ಲೆಗೆ ಹೆಚ್ಚಿನ ಅನುದಾನ ನೀಡುವಂತೆ ಮಲೆಮಹದೇಶ್ವರ ಬೆಟ್ಟದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಒತ್ತಾಯಿಸುತ್ತೇವೆ. ಆದಾಯದಲ್ಲಿ ರಾಜ್ಯದಲ್ಲೇ 2ನೇ ಸ್ಥಾನವನ್ನು ಪಡೆದಿರುವ ಮಲೆ ಮಹದೇಶ್ವರ ಬೆಟ್ಟವನ್ನು ತಿರುಪತಿ ಮಾದರಿಯಲ್ಲಿ ಅಭಿವೃದ್ಧಿ ಮಾಡಬೇಕು. ತಿರುಪತಿ ಮಾದರಿಯಲ್ಲೇ ದಾಸೋಹ ಭವನ ನಿರ್ಮಾಣ ಮಾಡಲಾಗುವುದು ಎಂದರು.

ADVERTISEMENT

ಪ್ರಾಧಿಕಾರದ ಕಾರ್ಯದರ್ಶಿ ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್, ಎಂಜಿನಿಯರ್ ಚಿನ್ನಣ್ಣ, ಪಿಡಿಒ ಕಿರಣ್ ಕುಮಾರ್, ಮುಖಂಡರಾದ ಶೇಖರ್, ಪೊನ್ನಾಚಿ ಡಿ.ಕೆ ರಾಜು, ಡಿ.ಆರ್ ಮಾದೇಶ್, ಚೆನ್ನಲಿಂಗನಹಳ್ಳಿ ವೆಂಕಟೇಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.