ಗುಂಡ್ಲುಪೇಟೆ: ಪಟ್ಟಣದ 2ನೇ ವಾರ್ಡ್‌ನ ಜಾಕೀರ್ ಹುಸೇನ್ ನಗರ ಬಡಾವಣೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸುಮಾರು ₹50 ಲಕ್ಷ ವೆಚ್ಚದ ಅನುದಾನದಡಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಪುರಸಭೆ ಸದಸ್ಯ ಎಚ್.ಆರ್.ರಾಜ್ ಗೋಪಾಲ್ ಭೂಮಿ ಪೂಜೆ ನೆರವೇರಿಸಿದರು.
ರಾಜ್ ಗೋಪಾಲ್ ಮಾತನಾಡಿ, ವಾರ್ಡ್‌ಗೆ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಹಂತ ಹಂತವಾಗಿ ಮಾಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಸರ್ಕಾರದ ವಿವಿಧ ಇಲಾಖೆಯ ಅನುದಾನ ತಂದು ವಾರ್ಡ್ ಇನ್ನಷ್ಟು ಅಭಿವೃದ್ಧಿ ಪಡಿಸಲಾಗುವುದು ಎಂದು ತಿಳಿಸಿದರು.
ಎಸ್‌ಡಿಪಿಐ ತಾಲ್ಲೂಕು ಘಟಕದ ಅಧ್ಯಕ್ಷ ತೌಸಿಫ್ ಪಾಷ, ಅಕ್ರಮ್, ರಿಜ್ವಾನ್, ಇರ್ಷಾದ್, ಹಜರತ್ ಇಮ್ರಾನ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.