
ಪ್ರಜಾವಾಣಿ ವಾರ್ತೆ
ಸಾವು (ಪ್ರಾತಿನಿಧಿಕ ಚಿತ್ರ)
ಕೊಳ್ಳೇಗಾಲ: ತಾಲ್ಲೂಕಿನ ಕೊಂಗರಹಳ್ಳಿ ಗ್ರಾಮದ ರಸ್ತೆಯಲ್ಲಿ ಭಾನುವಾರ ಪಾದಚಾರಿಗೆ ಡಿಕ್ಕಿ ಹೊಡೆದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ರಾವಂದೂರು ಗ್ರಾಮದ ಮನೋಹರ್(18) ಮೃತರು. ಸಹ ಸವಾರ ಮದ್ದೂರು ರವಿಕುಮಾರ್ ಹಾಗೂ ಪಾದಚಾರಿ ಕಾಮಗೆರೆ ಸುರೇಶ್ ಗಾಯಗೊಂಡು ಕಾಮಗೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೈಕ್ ಸವಾರರು ಬೆಂಗಳೂರಿನ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು ರಜಾ ದಿನ ಭಾನುವಾರ ಮಲೆಮಹದೇಶ್ವರ ಬೆಟ್ಟಕ್ ತೆರಳಿ ವಾಪಸ್ ಬರುವಾಗ ಕೊಂಗರಹಳ್ಳಿ ಗ್ರಾಮದ ರಸ್ತೆಯಲ್ಲಿ ಈ ಅವಘಡ ಸಂಘವಿಸಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.