ADVERTISEMENT

ಚಾಮರಾಜನಗರ: ಬಿಆರ್‌ಟಿ: ಪಕ್ಷಿ ಸಮೀಕ್ಷೆ ಚಾಲನೆ

​ಪ್ರಜಾವಾಣಿ ವಾರ್ತೆ
Published 27 ಜನವರಿ 2023, 6:14 IST
Last Updated 27 ಜನವರಿ 2023, 6:14 IST
ಪಕ್ಷಿ ಸಮೀಕ್ಷೆಗೆ ನೋಂದಣಿ ಮಾಡಿಕೊಂಡಿರುವ ಸ್ವಯಂ ಸೇವಕರೊಂದಿಗೆ ದೀಪ್‌ ಜೆ.ಕಾಂಟ್ರಾಕ್ಟರ್‌ ಅವರು ಗುರುವಾರ ಸಮಾಲೋಚನೆ ನಡೆಸಿದರು
ಪಕ್ಷಿ ಸಮೀಕ್ಷೆಗೆ ನೋಂದಣಿ ಮಾಡಿಕೊಂಡಿರುವ ಸ್ವಯಂ ಸೇವಕರೊಂದಿಗೆ ದೀಪ್‌ ಜೆ.ಕಾಂಟ್ರಾಕ್ಟರ್‌ ಅವರು ಗುರುವಾರ ಸಮಾಲೋಚನೆ ನಡೆಸಿದರು   

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಗುರುವಾರ ಪಕ್ಷಿ ಸಮೀಕ್ಷೆಗೆ ಚಾಲನೆ ನೀಡಲಾಯಿತು.

ಕೆ.ಗುಡಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ, ಸಮೀಕ್ಷೆ ಮಾಡಲು ಹೆಸರು ನೋಂದಣಿ ಮಾಡಿಕೊಂಡಿರುವ ಸ್ವಯಂ ಸೇವಕರು ಹಾಗೂ ವಿದ್ಯಾರ್ಥಿಗಳಿಗೆ ಗಣತಿ ಕಾರ್ಯದ ಬಗ್ಗೆ ಬಿಆರ್‌ಟಿ ಡಿಸಿಎಫ್‌ ದೀಪ್‌ ಜೆ.ಕಾಂಟ್ರಾಕ್ಟರ್‌ ಹಾಗೂ ಇತರೆ ಅಧಿಕಾರಿಗಳು ವಿವರಣೆ ನೀಡಿದರು.

50 ಮಂದಿ ಸ್ವಯಂ ಸೇವಕರು ಹಾಗೂ 17 ಮಂದಿ ವಿದ್ಯಾರ್ಥಿಗಳು ಸಮೀಕ್ಷೆಯಲ್ಲಿ ಪಾಲ್ಗೊಳ್ಳಲಿದ್ದು, 25 ತಂಡಗಳನ್ನು ಮಾಡಲಾಗಿದೆ. ಶುಕ್ರವಾರದಿಂದ ಭಾನುವಾರದವರೆಗೂ ಸಮೀಕ್ಷೆ ನಡೆಯಲಿದೆ. ಶುಕ್ರವಾರ ಬೆಳಿಗ್ಗೆ ಬೇಗ ನಿಗದಿತ ಮಾರ್ಗದಲ್ಲಿ ಸ್ವಯಂ ಸೇವಕರು ಗಣತಿ ಕಾರ್ಯ ಆರಂಭಿಸಲಿದ್ದಾರೆ ಎಂದು ದೀಪ್‌ ಕಾಂಟ್ರಾಕ್ಟರ್‌ ಮಾಹಿತಿ ನೀಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.