ಗುಂಡ್ಲುಪೇಟೆ: ಪಟ್ಟಣದ ಮಡಹಳ್ಳಿ ಸರ್ಕಲ್‌ನಲ್ಲಿ ಡಾ. ಶಿವಕುಮಾರ್ ಸ್ವಾಮೀಜಿ ಜನ್ಮ ದಿನೋತ್ಸವವನ್ನು ಶ್ರದ್ಧಾ–ಭಕ್ತಿಯಿಂದ ಆಚರಿಸಲಾಯಿತು. ಅನ್ನದಾನ ಸಹ ಏರ್ಪಡಿಸಲಾಗಿತ್ತು.
ಡಾ.ಶಿವಕುಮಾರ್ ಸ್ವಾಮೀಜಿ ಯುವಕರ ಬಳಗದ ವತಿಯಿಂದ ಏರ್ಪಡಿಸಿದ್ದ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಗುಂಡ್ಲುಪೇಟೆ ಠಾಣೆ ಪೊಲೀಸ್ ಇನ್‌ಸ್ಪೆಕ್ಟರ್ ಜಯಕುಮಾರ್ ಶ್ರೀಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನಮನ ಸಲ್ಲಿಸಿದರು.
ನಂತರ ಮಾತನಾಡಿ, ನಡೆದಾಡುವ ದೇವರು ಎಂದು ಕರೆಸಿಕೊಳ್ಳುತ್ತಿದ್ದ ಶಿವಕುಮಾರ್ ಸ್ವಾಮೀಜಿ ದಾಸೋಹದ ಮೂಲಕ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಸಮಾಜಕ್ಕೆ ಮಾದರಿಯಾಗಿದ್ದಾರೆ. ಅವರ ಸರಳ ಜೀವನ ಕ್ರಮವನ್ನು ಪ್ರತಿಯೊಬ್ಬರು ಅನುಸರಿಸುವ ಮೂಲಕ ಪ್ರತಿಯೊಬ್ಬರೂ ಸನ್ಮಾರ್ಗದಲ್ಲಿ ನಡೆಯಬೇಕೆಂದು ಸಲಹೆ ನೀಡಿದರು.
ಪುರಸಭೆ ಸದಸ್ಯ ಶಶಿಧರ್ ದೀಪು, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಅಲೀಂ ಪಾಷಾ, ಶಬರೀಶ್, ಸಚಿನ್, ನಮೋ ಮಂಜು, ಶಿಂಡನಪುರ ಶಿವಕುಮಾರ್, ಅಕ್ಷಯ್, ಶಶಾಂಕ್, ಹರೀಶ್, ಅಭಿ, ಶಾಂತಪ್ಪ ದೊಡ್ಡತುಪ್ಪೂರು, ಕಾನ್‌ಸ್ಟೆಬಲ್‌ಗಳಾದ ಮಹೇಶ್, ನಟೇಶ್, ಜಯಕುಮಾರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.