ADVERTISEMENT

ಬಿಹಾರ ಚುನಾವಣೆಯಲ್ಲಿ ಗೆಲುವು: ಬಿಜೆಪಿ ಸಂಭ್ರಮಾಚರಣೆ

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2025, 4:49 IST
Last Updated 15 ನವೆಂಬರ್ 2025, 4:49 IST
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಜಯ ಸಾಧಿಸಿರುವ ಹಿನ್ನೆಲೆಯಲ್ಲಿ ಚಾಮರಾಜನಗರದಲ್ಲಿ ಶುಕ್ರವಾರ ಬಿಜೆಪಿ ವತಿಯಿಂದ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಲಾಯಿತು
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಜಯ ಸಾಧಿಸಿರುವ ಹಿನ್ನೆಲೆಯಲ್ಲಿ ಚಾಮರಾಜನಗರದಲ್ಲಿ ಶುಕ್ರವಾರ ಬಿಜೆಪಿ ವತಿಯಿಂದ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಲಾಯಿತು   

ಚಾಮರಾಜನಗರ: ಬಿಹಾರದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಜಯ ಸಾಧಿಸಿದ ಹಿನ್ನೆಲೆಯಲ್ಲಿ ಶುಕ್ರವಾರ ನಗರದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಸಂಭ್ರಮಾಚರಣೆ ಆಚರಿಸಿದರು.

ನಗರದ ಚಾಮರಾಜೇಶ್ವರ ಉದ್ಯಾನದಲ್ಲಿ ಸಮಾವೇಶಗೊಂಡ ಕಾರ್ಯಕರ್ತರು ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಪರವಾಗಿ ಜೈಕಾರ ಕೂಗಿ ಸಂಭ್ರಮಿಸಿದರು.

ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ಮಾತನಾಡಿ, ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಗೆಲುವು ಸಾಧಿಸಿದ್ದು ಬಿಜೆಪಿ ಪ್ರಾಬಲ್ಯವನ್ನು ಸಾಬೀತುಪಡಿಸಿದೆ ಎಂದರು.

ADVERTISEMENT

ಚುನಾವಣೆಗಳಲ್ಲಿ ಮತಗಳ್ಳತನವಾಗಿದೆ ಎಂದು ಕಾಂಗ್ರೆಸ್‌ ರಾಜ್ಯದಾದ್ಯಂತ ಸಹಿ ಸಂಗ್ರಹ ಚಳವಳಿ ಮಾಡುತ್ತಿದ್ದರೂ ಪ್ರಧಾನಿ ಮೋದಿ ಹಾಗೂ ಬಿಜೆಪಿ ವರ್ಚಸ್ಸು ಕುಂದಿಲ್ಲ ಎಂಬುದಕ್ಕೆ ಬಿಹಾರ ಚುನಾವಣಾ ಫಲಿತಾಂಶವೇ ಸಾಕ್ಷಿಯಾಗಿದೆ. ಬಿಹಾರದ ಜನತೆ ಬಿಜೆಪಿ ಆಡಳಿತವನ್ನು ಒಪ್ಪಿಕೊಂಡು ಸುಭದ್ರ ದೇಶ ನಿರ್ಮಾಣಕ್ಕೆ ಮತ ಹಾಕಿದ್ದಾರೆ ಎಂದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ವೃಷಭೇಂದ್ರಪ್ಪ ಮಾತನಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೂಡ್ನಾಕೂಡು ಪ್ರಕಾಶ್, ಜಿಲ್ಲಾ ಉಪಾಧ್ಯಕ್ಷ ಶಿವು ವಿರಾಟ್, ನಗರ ಮಂಡಲ ಅಧ್ಯಕ್ಷ ಶಿವರಾಜ್, ಗ್ರಾಮಾಂತರ ಮಂಡಲ ಅಧ್ಯಕ್ಷ ಕಾಡಳ್ಳಿ ಕುಮಾರ್, ಒಬಿಸಿ ಮೋರ್ಚಾ ರಾಷ್ಟ್ರೀಯ ಕಾರಿಕಾರಿಣಿ ಸದಸ್ಯ ನೂರೊಂದು ಶೆಟ್ಟಿ,  ಚೂಡಾ ಮಾಜಿ ಅಧ್ಯಕ್ಷ ಬಾಲಸುಬ್ರಹ್ಮಣ್ಯಂ, ಯುವ ಮೋರ್ಚಾ ಜಿಲ್ಲಾಧ್ಯಕ್ಷ  ಸೂರ್ಯ ಕುಮಾರ್,  ಜಿಲ್ಲಾ ಮೋರ್ಚಾ ಅಧ್ಯಕ್ಷೆ ಕಮಲಮ್ಮ, ಪ್ರಧಾನ ಕಾರ್ಯದರ್ಶಿ ಶೈಲಜಾ, ಮುಖಂಡರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.