ADVERTISEMENT

ಬಿಜೆಪಿಯಲ್ಲಿ ಅಸ್ತಿತ್ವಕ್ಕಾಗಿ ಕಸರತ್ತು: ಸಚಿವ ಬೋಸರಾಜು

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2025, 23:59 IST
Last Updated 15 ಸೆಪ್ಟೆಂಬರ್ 2025, 23:59 IST
<div class="paragraphs"><p>ಎನ್‌. ಎಸ್‌. ಬೋಸರಾಜು<br></p></div>

ಎನ್‌. ಎಸ್‌. ಬೋಸರಾಜು

   

ಮಡಿಕೇರಿ: ‘ರಾಜ್ಯ ಬಿಜೆಪಿಯಲ್ಲಿ ಗುಂಪು ಗಾರಿಕೆ ಇದ್ದು, ಅಸ್ತಿತ್ವ ಉಳಿಸಿಕೊಳ್ಳಲು ಪ್ರತಿ ಗುಂಪು ಗೊಂದಲ ಸೃಷ್ಟಿಸುತ್ತಿದೆ’ ಎಂದು ಸಚಿವ ಎನ್.ಎಸ್.ಬೋಸರಾಜು ಇಲ್ಲಿ ಟೀಕಿಸಿದರು.

‘ಪಕ್ಷದಲ್ಲಿ ಅಸ್ತಿತ್ವ ಉಳಿಸಿಕೊಳ್ಳಲು ಬಾನು ಮುಷ್ತಾಕ್‌ ಅವರಿಗೆ ದಸರಾ ಉದ್ಘಾಟನೆಗೆ ಆಹ್ವಾನ ಪ್ರಶ್ನಿಸಿ ಪ್ರತಾಪ ಸಿಂಹ ಪಿಐಎಲ್‌ ಸಲ್ಲಿಸಿದ್ದರು’ ಎಂದರು.

ADVERTISEMENT

‘ಬಿಜೆಪಿಯಿಂದ ಬೆಂಕಿ ಹಚ್ಚುವ ಕೆಲಸ’

ಚಾಮರಾಜನಗರ: ‘ಗಲಭೆ ನಡೆದರೆ ಎಲ್ಲ ಧರ್ಮದವರನ್ನು ಒಗ್ಗೂಡಿಸಿ ಶಾಂತಿ ಸ್ಥಾಪಿಸುವ ಬದಲಾಗಿ ಬಿಜೆಪಿ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ’ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್‌.ಎಂ.ರೇವಣ್ಣ ಟೀಕಿಸಿದರು.

ಸೋಮವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, 'ದಸರಾ ಉದ್ಘಾಟನೆ ಕುರಿತು ಬಿಜೆಪಿ ಕೂಗುಮಾರಿಯಂತೆ ಅರಚುತ್ತಿದೆ. ಈ ಹಿಂದೆ ಹಿಂದೆ ಮಿರ್ಜಾ ಇಸ್ಮಾಯಿಲ್, ಕವಿ ನಿಸಾರ್ ಅಹಮದ್ ದಸರಾ ಉದ್ಘಾಟಿಸಿರುವ ಇತಿಹಾಸ ಇದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.