ADVERTISEMENT

‘ಕಾರ್ಯಕರ್ತರು ಪಕ್ಷ ಸಂಘಟನೆಯಲ್ಲಿ ತೊಡಗಿ’

​ಪ್ರಜಾವಾಣಿ ವಾರ್ತೆ
Published 16 ಮೇ 2025, 16:10 IST
Last Updated 16 ಮೇ 2025, 16:10 IST
ಸಂತೇಮರಹಳ್ಳಿ ಪ್ರವಾಸಿ ಮಂದಿರದಲ್ಲಿ ನಡೆದ ಕೊಳ್ಳೇಗಾಲ ಗ್ರಾಮಾಂತರ ಬಿಜೆಪಿ ಮಂಡಲ ಸಭೆಯಲ್ಲಿ ಎನ್.ಮಹೇಶ್ ಮಾತನಾಡಿದರು
ಸಂತೇಮರಹಳ್ಳಿ ಪ್ರವಾಸಿ ಮಂದಿರದಲ್ಲಿ ನಡೆದ ಕೊಳ್ಳೇಗಾಲ ಗ್ರಾಮಾಂತರ ಬಿಜೆಪಿ ಮಂಡಲ ಸಭೆಯಲ್ಲಿ ಎನ್.ಮಹೇಶ್ ಮಾತನಾಡಿದರು   

ಸಂತೇಮರಹಳ್ಳಿ: ‘ಪಕ್ಷ ಸಂಘಟನೆ ಮಾಡುವ ನಿಟ್ಟಿನಲ್ಲಿ ಕಾರ್ಯಕರ್ತರು ಶ್ರಮ ವಹಿಸಬೇಕಾಗಿದೆ’ ಎಂದು ಮುಖಂಡ ಎನ್.ಮಹೇಶ್ ಹೇಳಿದರು.

ಇಲ್ಲಿನ ಪ್ರವಾಸಿ ಮಂದಿರದಲ್ಲಿ ಈಚೆಗೆ ಕೊಳ್ಳೇಗಾಲ ಬಿಜೆಪಿ ಗ್ರಾಮಾಂತರ ಮಂಡಲದಿಮದ ಹಮ್ಮಿಕೊಳ್ಳಲಾಗಿದ್ದ ಪಕ್ಷ ಸಂಘಟನೆ ಪರ್ವ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಮುಂಬರುವ ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಸಜ್ಜಾಗಬೇಕು. ಈ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶಗಳ ಬೂತ್‌ಮಟ್ಟದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪಕ್ಷ ಸಂಘಟನೆ ಮಾಡುವ ನಿಟ್ಟಿನಲ್ಲಿ ಮುಂದಾಗಬೇಕು ಎಂದರು.

ADVERTISEMENT

ಕಾಶ್ಮೀರದಲ್ಲಿ ಉಗ್ರಗಾಮಿಗಳು ಭಾರತೀಯರ ಮೇಲೆ ನಡೆಸಿದ ದಾಳಿಯ ಪ್ರತಿಕಾರವಾಗಿ ದಾಳಿ ನಡೆಸಿ ಉಗ್ರರರನ್ನು ನಮ್ಮ ಸೈನಿಕರು ಸದೆ ಬಡಿದಿದ್ದಾರೆ. ಈ ನಿಮಿತ್ತ ಪಕ್ಷದಿಂದ ದೇಶ ವ್ಯಾಪ್ತಿಯಲ್ಲಿ ವಿಜಯೋತ್ಸವ ಆಚರಿಸಲಾಯಿತು. ಪಕ್ಷದ ಕಾರ್ಯಕರ್ತರು ಪ್ರಧಾನಿ ಮಂತ್ರಿ ನರೇಂದ್ರಮೋದಿ ಅವರ ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರಿಗೆ ಅರಿವು ಮೂಡಿಸುವ ಮೂಲಕ ಪಕ್ಷ ಸಂಘಟನೆ ಮಾಡಲು ಮುಂದಾಗಬೇಕು ಎಂದು ಕರೆ ನೀಡಿದರು.

ಕೊಳ್ಳೇಗಾಲ ಗ್ರಾಮಾಂತರ ಮಂಡಲ ಉಸ್ತುವಾರಿ ಎ.ಆರ್.ಬಾಬು, ಕೊಳ್ಳೇಗಾಲ ಗ್ರಾಮಾಂತರ ಅಧ್ಯಕ್ಷ ಕಾವುದವಾಡಿ ನಾಗೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊನ್ನೂರು ಮಹದೇವಸ್ವಾಮಿ, ಜಿಲ್ಲಾ ಒಬಿಸಿ ಅಧ್ಯಕ್ಷ ಸೋಮಣ್ಣ ಉಪ್ಪಾರ್, ಜಿಲ್ಲಾ ಉಪಾಧ್ಯಕ್ಷ ಟಗರಪುರ ರೇವಣ್ಣ, ಸಂತೇಮರಹಳ್ಳಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಲೋಕೇಶ್, ಮಂಡಲ ಪ್ರಧಾನ ಕಾರ್ಯದರ್ಶಿ ನಂದೀಶ್, ಕುಂತೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರವಿ, ಚುಂಗಡಿಪುರ ಮಹೇಶ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.