ಚಾಮರಾಜನಗರ: ಜಿಲ್ಲೆಯಲ್ಲಿ ಪಕ್ಷಕ್ಕೆ ಹೊಸದಾಗಿ 1.33 ಲಕ್ಷ ಸದಸ್ಯರನ್ನು ಸೇರ್ಪಡೆಗೊಳಿಸುವ ಗುರಿ ಹೊಂದಲಾಗಿದೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ ಹೇಳಿದರು.
ನಗರದಬಿಜೆಪಿ ಕಚೇರಿಯಲ್ಲಿ ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಗ್ರಾಮಾಂತರ ಮಂಡಲದ ವತಿಯಿಂದ ಸಂಘಟನಾ ಪರ್ವ ಸದಸ್ಯತ್ವ ಅಭಿಯಾನದ ಪೂರ್ವಭಾವಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ಪ್ರಧಾನಿ ನರೇಂದ್ರ ಮೋದಿ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಸಂಘಟನೆಗೆ ಹೆಚ್ಚು ಒತ್ತು ನೀಡಿದ ಕಾರಣದಿಂದ ಇಡೀ ದೇಶದಲ್ಲಿ ಬಿಜೆಪಿ ಸದಸ್ಯತ್ವ ಹೆಚ್ಚಾಗಿದೆ. ವಿಶ್ವದಲ್ಲಿ ಬಿಜೆಪಿ ಹೆಚ್ಚು ಸದಸ್ಯತ್ವ ಹೊಂದಿರುವ ರಾಜಕೀಯ ಪಕ್ಷವಾಗಿದೆ. ತಮ್ಮ ಮೊಬೈಲ್‌ನಿಂದ 89808-08080 ಸಂಖ್ಯೆಗೆ ಕರೆ ಮಾಡಿ ಎಲ್ಲ ವಿವರವನ್ನು ಸಲ್ಲಿಸಿ ಸದಸ್ಯತ್ವ ಪಡೆಯಬಹುದು ಎಂದರು.
ಕಳೆದ ಸಾಲಿನಲ್ಲಿ ನಡೆದ ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಜಿಲ್ಲೆ 38 ಸಾವಿರ ಸದಸ್ಯತ್ವ ಮಾಡಲಾಗಿತ್ತು. ಈ ಬಾರಿ 1.33 ಲಕ್ಷ ಸದಸ್ಯರ ಗುರಿ ಇಟ್ಟುಕೊಳ್ಳಲಾಗಿದೆ. ಚಾಮರಾಜನಗರ ಗ್ರಾಮಾಂತರ ಮಂಡಲದಲ್ಲಿ 25 ಸಾವಿರ ಸದಸ್ಯತ್ವ ಗುರಿಯಿಟ್ಟುಕೊಳ್ಳಲಾಗಿದೆ. ಎಲ್ಲ ಮಂಡಲದ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಸದಸ್ಯತ್ವ ಅಭಿಯಾನಕ್ಕೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಗ್ರಾಮಾಂತರ ಮಂಡಲ ಅಧ್ಯಕ್ಷ ಎಚ್.ಎಂ.ಬಸವಣ್ಣ ಮಾತನಾಡಿದರು.
ಮುಖಂಡರಾದ ಸಿ.ಗುರುಸ್ವಾಮಿ, ಎಂ.ರಾಮಚಂದ್ರ, ನಾಗಶ್ರೀಪ್ರತಾಪ್, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಬಸವಣ್ಣ, ಅಭಿಯಾನ ಜಿಲ್ಲಾ ಸಂಚಾಲಕ ಶಾಂತಮೂರ್ತಿ, ಸಹ ಸಂಚಾಲಕ ಎಂ.ಎಸ್.ಫೃಥ್ವಿರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನೂರೊಂದುಶೆಟ್ಟಿ, ಚಾಮರಾಜನಗರ ಗ್ರಾಮಾಂತರ ಮಂಡಲ ಅಭಿಯಾನ ಸಂಚಾಲಕ ಪುರುಷೋತ್ತಮ, ಸಹ ಸಂಚಾಲಕ ಮಹದೇವಸ್ವಾಮಿ, ಮಂಡಲ ಪ್ರಧಾನ ಕಾರ್ಯದರ್ಶಿ ಕುಮಾರಸ್ವಾಮಿ, ಜಿಲ್ಲಾ ಉಪಾಧ್ಯಕ್ಷ ಚಂದ್ರಶೇಖರ್, ಮುಖಂಡರಾದ ಕೂಡ್ಲೂರು ಹನಮಂತಶೆಟ್ಟಿ, ಮಂಗಲಶಿವಕುಮಾರ್, ಅಯ್ಯನಪುರಶಿವಕುಮಾರ್, ಉಡಿಗಾಲಕುಮಾರಸ್ವಾಮಿ, ವಕೀಲರಾದ ಎಂ.ಚಿನ್ನಸ್ವಾಮಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.