ADVERTISEMENT

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆಗೆ ಮುಂದಾದ ಬಿಜೆಪಿ ಮುಖಂಡರು

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2025, 5:32 IST
Last Updated 21 ನವೆಂಬರ್ 2025, 5:32 IST
   

ಚಾಮರಾಜನಗರ: ನಗರದ ಬಿ.ಆರ್‌.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದ ಸಮೀಪ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆಗೆ ಮುಂದಾದ ಬಿಜೆಪಿ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದು ಕೆಲ ಹೊತ್ತಿನ ಬಳಿಕ ಬಿಡುಗಡೆ ಮಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲೆಗೆ ಹಲವು ಬಾರಿ ಭೇಟಿನೀಡಿದರೂ ಜಿಲ್ಲೆಯ ಅಭಿವೃದ್ಧಿಯಾಗಿಲ್ಲ, ವಿಶೇಷ ಪ್ಯಾಕೇಜ್ ನೀಡಿಲ್ಲ ಎಂದು ಆರೋಪಿಸಿ ಹಾಗೂ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪದಲ್ಲಿ ಭಾಗವಹಿಸುವುದನ್ನು ವಿರೋಧಿಸಿ ಪ್ರತಿಭಟನೆ ಮಾಡಲು ಮುಂದಾದಾಗ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದರು.

ಪ್ರತಿಭಟನೆಯಲ್ಲಿ ಎಸ್‌ಟಿ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಬುಲೆಟ್ ಚಂದ್ರು, ನಗರಮಂಡಲ ಅಧ್ಯಕ್ಷ ಶಿವರಾಜ್, ಮಾಜಿ ಅಧ್ಯಕ್ಷ ಸುಂದರ್‌ರಾಜ್, ಭಕ್ತಿ ರಾಜು, ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಸೂರ್ಯ ಬಾಲರಾಜ್, ಯಾನಗಳ್ಳಿ ನಂಜುಂಡನಾಯಕ, ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಕೂಸಣ್ಣ, ರಾಜೇಂದ್ರ, ಮಣಿ ಸೇರಿದಂತೆ ಹ ಲವರನ್ನು ವಶಕ್ಕೆ ಪಡೆದು ಕಾರ್ಯಕ್ರಮ ಮುಗಿದ ಬಳಿಕ ಬಿಡುಗಡೆ ಮಾಡಲಾಯಿತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.