ADVERTISEMENT

ಚಾಮರಾಜನಗರ| ನಿತಿನ್ ನಬಿನ್ ನೇಮಕ: ಬಿಜೆಪಿ ವಿಜಯೋತ್ಸವ

​ಪ್ರಜಾವಾಣಿ ವಾರ್ತೆ
Published 21 ಜನವರಿ 2026, 1:58 IST
Last Updated 21 ಜನವರಿ 2026, 1:58 IST
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಮಂಗಳವಾರ ನಗರದ ಚಾಮರಾಜೇಶ್ವರ ಉದ್ಯಾನದ ಎದುರು ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಸಿಹಿ ಹಂಚಿ ಸಂಭ್ರಮಿಸಿದರು
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಮಂಗಳವಾರ ನಗರದ ಚಾಮರಾಜೇಶ್ವರ ಉದ್ಯಾನದ ಎದುರು ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಸಿಹಿ ಹಂಚಿ ಸಂಭ್ರಮಿಸಿದರು   

ಚಾಮರಾಜನಗರ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಮಂಗಳವಾರ ನಗರದ ಚಾಮರಾಜೇಶ್ವರ ಉದ್ಯಾನದ ಎದುರು ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಸಿಹಿ ಹಂಚಿ ಸಂಭ್ರಮಿಸಿದರು.

ನೂತನ ಅಧ್ಯಕ್ಷ ನಿತಿನ್ ನಬಿನ್ ಹಾಗೂ ‌ಪ್ರಧಾನಿ ಮೋದಿ, ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಪರವಾಗಿ ಜೈಕಾರ ಕೂಗಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ವೃಷಬೇಂದ್ರಪ್ಪ ಮಾತನಾಡಿ, ಬಿಜೆಪಿಯಲ್ಲಿ ಯುವ ನಾಯಕತ್ವಕ್ಕೆ ಮನ್ನಣೆ ಸಿಕ್ಕಿದ್ದು ನಿತಿನ್ ನಬಿನ್ ರಾಷ್ಟ್ರೀಯ ಅಧ್ಯಕ್ಷರಾಗಿರುವುದು ಯುವಜನತೆಗೆ ಸ್ಫೂರ್ತಿ ಸಿಕ್ಕಂತಾಗಿದೆ. ಪಕ್ಷದಲ್ಲಿ ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ಹಾಗೂ ಸ್ಥಾನಮಾನ ಸಿಗುತ್ತದೆ ಎಂಬುದಕ್ಕೆ ನಿದರ್ಶನ ಎಂದರು.

ಈ ಸಂದರ್ಭ ಚುಡಾ ಮಾಜಿ ಅಧ್ಯಕ್ಷ  ಶಾಂತಮೂರ್ತಿ ಕುಲಗಾಣ, ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಸೂರ್ಯಕುಮಾರ್, ಎಸ್‌ಟಿ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಬುಲೆಟ್ ಚಂದ್ರು, ನಗರದ ಮಂಡಲ ಪ್ರಧಾನ ಕಾರ್ಯದರ್ಶಿ ಕೂಸಣ್ಣ, ನಗರಸಭಾ ಮಾಜಿ ಸದಸ್ಯ ಶಿವಣ್ಣ, ರವಿ, ಕಾರ್ಯಾಲಯ ಕಾರ್ಯದರ್ಶಿ ರಂಗಸ್ವಾಮಿ, ದೊರೆಸ್ವಾಮಿ, ಕುಮಾರ್ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.