ADVERTISEMENT

ಉಪಚುನಾವಣೆಯಲ್ಲಿ ಗೆಲುವು: ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2020, 14:49 IST
Last Updated 10 ನವೆಂಬರ್ 2020, 14:49 IST
ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದಿರುವುದಕ್ಕೆ ಪಕ್ಷದ ಕಾರ್ಯಕರ್ತರು, ಮುಖಂಡರು ಸಂಭ್ರಮಿಸಿದರು
ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದಿರುವುದಕ್ಕೆ ಪಕ್ಷದ ಕಾರ್ಯಕರ್ತರು, ಮುಖಂಡರು ಸಂಭ್ರಮಿಸಿದರು   

ಚಾಮರಾಜನಗರ: ರಾಜರಾಜೇಶ್ವರಿ ನಗರ ಹಾಗೂ ಶಿರಾ ಶಿರಾ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಜಯಗಳಿಸಿದ್ದಕ್ಕೆ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ಎರಡೂ ಕ್ಷೇತ್ರಗಳ ಫಲಿತಾಂಶ ಹೊರ ಬೀಳುತ್ತಲೇ,ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸೇರಿದ ಪಕ್ಷದ ಮುಖಂಡರು, ಕಾರ್ಯಕರ್ತರು ಅಲ್ಲಿಂದ ಮೆರವಣಿಗೆ ಹೊರಟು, ವೀರಭದ್ರಸ್ವಾಮಿ ದೇವಸ್ಥಾನ, ರಥ ಬೀದಿಯ ಮೂಲಕ ಭುವನೇಶ್ವರಿ ವೃತ್ತಕ್ಕೆ ತೆರಳಿ ಪಟಾಕಿ ಸಿಡಿಸಿ, ಸಿಹಿ ಹಂಚಿದರು.ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವಿಜಯೇಂದ್ರ ಹಾಗೂ ಬಿಜೆಪಿ ಪರ ಜೈಕಾರ ಕೂಗಿ ಸಂಭ್ರಮಿಸಿದರು.

ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸುಂದರ್ ಅವರು ಮಾತನಾಡಿ, ‘ಆರ್.ಆರ್.ನಗರದಲ್ಲಿ ಮುನಿರತ್ನ ಹಾಗೂ ಶಿರಾದಲ್ಲಿ ಡಾ. ರಾಜೇಶ್‌ಗೌಡ ಅವರು ಗೆಲುವು ಸಾಧಿಸಿರುವುದು ತುಂಬಾ ಸಂತಸವಾಗಿದೆ. ಉಪಚುನಾವಣೆಯಲ್ಲೂ ಅಲ್ಲಿನ ಮತದಾರರು ಬಿಜೆಪಿ ಬೆಂಬಲಿಸುವ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕೈ ಬಲಪಡಿಸಿದ್ದಾರೆ. ಜನರು ಬಿಜೆಪಿ ಪರವಾಗಿದ್ದೇವೆ ಎಂಬ ಸಂದೇಶ ರವಾನಿಸಿ ವಿರೋಧ ಪಕ್ಷಗಳಿಗೆ ತಕ್ಕಪಾಠ ಕಲಿಸಿದ್ದಾರೆ’ ಎಂದರು.

ADVERTISEMENT

ಬಿಜೆಪಿ ಎಸ್‌ಟಿ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಎಂ.ರಾಮಚಂದ್ರ, ನಗರಸಭಾ ಸದಸ್ಯರಾದ ಶಿವರಾಜ್, ಮನೋಜ್‌ಪಟೇಲ್, ನಗರ ಮಂಡಲ ಅಧ್ಯಕ್ಷ ರಾಜು, ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್, ಶಿವಣ್ಣ, ಗ್ರಾಮಾಂತರ ಮಂಡಲ ಅಧ್ಯಕ್ಷ ಜಿ.ಪ್ರಶಾಂತ್, ಪ್ರಧಾನ ಕಾರ್ಯದರ್ಶಿ ಅರಕಲವಾಡಿ ಮಹೇಶ್, ಮುಖಂಡರಾದ ನಿಜಗುಣರಾಜು, ಬಾಲಸುಬ್ರಹ್ಮಣ್ಯ, ಸಿ.ಎಸ್.ಮಹದೇವನಾಯಕ, ಸುರೇಶ್‌ನಾಯಕ, ರೈತ ಮೋರ್ಚಾದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನಸ್ವಾಮಿ, ಪ್ರಧಾನ ಕಾರ್ಯದರ್ಶಿ ಶಮಿತ್‌ಕುಮಾರ್, ಯುವಮೋರ್ಚಾದ ರಾಜ್ಯ ಉಪಾಧ್ಯಕ್ಷ ಧೀರಾಜ್, ಆನಂದ್ ಭಗೀರಥ್, ಎಂ.ಎಸ್.ಫೃಥ್ವಿರಾಜ್, ಜಿಲ್ಲಾ ಮಾಧ್ಯಮ ಪ್ರಮುಖ್ ಮಂಜುನಾಥ್, ಸಹ ಮಾಧ್ಯಮ ಪ್ರಮುಖ್ ಚಂದ್ರಶೇಖರ್, ನಂದೀಶ್, ವೀರೇಂದ್ರ, ಕುಮಾರಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.