ADVERTISEMENT

ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಸಂದೇಶ

​ಪ್ರಜಾವಾಣಿ ವಾರ್ತೆ
Published 2 ಮೇ 2025, 8:20 IST
Last Updated 2 ಮೇ 2025, 8:20 IST
   

ಚಾಮರಾಜನಗರ: ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಇರಿಸಲಾಗಿದೆ ಎಂಬ ಬೆದರಿಕೆ ಇ ಮೇಲ್ ಸಂದೇಶ ಬಂದಿದ್ದು ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಬೆಳಿಗ್ಗೆ 8 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯ ಇಮೇಲ್‌ಗೆ ಬೆದರಿಕೆ ಸಂದೇಶ ಬಂದಿದ್ದು, ಸುದ್ದಿ ತಿಳಿಯುತ್ತಿದ್ದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ ತೀವ್ರ ಆತಂಕಕ್ಕೆ ಒಳಗಾಗಿ ಕಚೇರಿ ಬಿಟ್ಟು ಹೊರ ನಡೆದರು.

ಎಸ್‌ಪಿ ಬಿ‌.ಟಿ.ಕವಿತಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

ADVERTISEMENT

ಸೆನ್ ಠಾಣೆ ಪೊಲೀಸರು ಆರೋಪಿಯ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ. ಕಿಡಿಗೇಡಿಯ ಐಪಿ ವಿಳಾಸ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಎಸ್‌ಪಿ ಮಾಹಿತಿ ನೀಡಿದರು.

ಅಧಿಕಾರಿಗಳ ಹಾಗೂ ಸಿಬ್ಬಂದಿಯ ಸುರಕ್ಷತಾ ದೃಷ್ಟಿಯಿಂದ ನೌಕರರನ್ನು ಕಚೇರಿಯಿಂದ ಸುರಕ್ಷಿತ ಸ್ಥಳಗಳಿಗೆ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ತಿಳಿಸಿದ್ದಾರೆ.

ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳ ಬಾಂಬ್ ಶೋಧಕಾರ್ಯದಲ್ಲಿ ತೊಡಗಿದೆ. ಜಿಲ್ಲಾಡಳಿತ ಭವನದ ಮೂಲೆ ಮೂಲೆಯಲ್ಲಿ ಶೋಧ ಕಾರ್ಯ ನಡೆಯುತ್ತಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.