ADVERTISEMENT

ಸವಲತ್ತು ಪಡೆದು ಸಬಲರಾಗಿ: ಬೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ. ರಾಮಪ್ಪ

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2025, 4:44 IST
Last Updated 28 ಡಿಸೆಂಬರ್ 2025, 4:44 IST
ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆ ಅತಿಥಿ ಗೃಹದಲ್ಲಿ ಶನಿವಾರ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎಂ. ರಾಮಪ್ಪ ಮುಖಂಡರೊಂದಿಗೆ ಸಭೆ ನಡೆಸಿದರು
ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆ ಅತಿಥಿ ಗೃಹದಲ್ಲಿ ಶನಿವಾರ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎಂ. ರಾಮಪ್ಪ ಮುಖಂಡರೊಂದಿಗೆ ಸಭೆ ನಡೆಸಿದರು   

ಹನೂರು: ಮಕ್ಕಳ ಶಿಕ್ಷಣಕ್ಕೆ ಸಮುದಾಯ ಆದ್ಯತೆ ನೀಡಬೇಕು. ಸರ್ಕಾರದ ಸವಲತ್ತುಗಳನ್ನು ಪಡೆದು ಸಬಲರಾಗಬೇಕು ಎಂದು ಕರ್ನಾಟಕ ಬೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ. ರಾಮಪ್ಪ ತಿಳಿಸಿದರು.

ಪಟ್ಟಣದ ಲೋಕೋಪಯೋಗಿ ಅತಿಥಿ ಗೃಹದಲ್ಲಿ ಬೋವಿ ಸಮುದಾಯದ ಮುಖಂಡರನ್ನು ಭೇಟಿ ಮಾಡಿ ಬಳಿಕ ಮಾತನಾಡಿದ ಅವರು, ಡಾ.ಬಿ.ಆರ್ ಅಂಬೇಡ್ಕರ್ ಅವರು ಹೇಳಿರುವಂತೆ ಶಿಕ್ಷಣ, ಸಂಘಟನೆ, ಹೋರಾಟದ ಮೂಲಕ ಆರ್ಥಿಕವಾಗಿ ಶೈಕ್ಷಣಿಕವಾಗಿ ಎಲ್ಲಾ ಮುಖ್ಯವಾಹಿನಿಗೆ ಬರಬೇಕು. ಸರ್ಕಾರದಿಂದ ಸಿಗುವ ಸೌಲಭ್ಯಗಳಾದ ಸಮುದಾಯದ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಭೂ ಒಡೆತನ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ, ಗಂಗಾ ಕಲ್ಯಾಣ ಯೋಜನೆ, ವೈಯಕ್ತಿಕ ಕೊಳವೆ ಬಾವಿ, ಉದ್ಯಮ ಶೀಲತಾ ಯೋಜನೆ ಸೇರಿದಂತೆ ಪ್ರೇರಣಾ ಯೋಜನೆಗಳನ್ನು ಸದುಪಯೋಗ ಮಾಡಿಕೊಂಡು ಆರ್ಥಿಕವಾಗಿ ಮುಂದೆ ಬರಬೇಕು ಎಂದು ಸಲಹೆ ನೀಡಿದರು.

ಮುಂದಿನ ವಾರ ರಾಜ್ಯ ಮಟ್ಟದ ಅಧಿಕಾರಿಗಳ ಸಭೆಯ ಕರೆದಿದ್ದು ಹನೂರು ತಾಲ್ಲೂಕಿನ ಬಗ್ಗೆ ಅಂಕಿ ಅಂಶಗಳನ್ನು ತೆಗೆದುಕೊಳ್ಳುತ್ತೇನೆ. ಜೊತೆಗೆ ಸರ್ಕಾರದಿಂದ ಬರುವ ಎಲ್ಲಾ ಸೌಕರ್ಯಗಳನ್ನು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಒದಗಿಸಲು ಶ್ರಮಿಸಲಾಗುವುದು ಎಂದು ತಿಳಿಸಿದರು. ಬಡವರಿಗೆ, ಕೂಲಿ ಕಾರ್ಮಿಕರಿಗೆ, ಮಹಿಳೆಯರಿಗೆ ನಿಗಮದ ಯೋಜನೆಗಳನ್ನು ತಲುಪಿಸಲು ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು.

ADVERTISEMENT

ಇದೇ ಸಂದರ್ಭದಲ್ಲಿ ಚಂಗವಾಡಿ ರಾಜು, ಎಸ್.ಆರ್. ಮಹದೇವ್, ರವಿಚಂದ್ರ, ಶಶಿಕುಮಾರ್, ಕೃಷ್ಣ, ಮೂರ್ತಿ, ರಾಮಸ್ವಾಮಿ, ರಾಕೇಶ್, ರಾಮು, ನಾಗೇಶ, ವೆಂಕಟೇಶ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.