ಕೊಳ್ಳೇಗಾಲ: ಇಲ್ಲಿನ ಕೊಂಗಳ ಕೆರೆಯಲ್ಲಿ ಆಟವಾಡುತ್ತಿದ್ದ ವೇಳೆ ನೀರಿನಲ್ಲಿ ಮುಳುಗಿ ನಗರದ ಬಾಪು ನಗರದ ನಿವಾಸಿ ಮಹದೇವ ಎಂಬುವರ ಮಗ ನಿತೀನ್ (7) ಎಂಬಾತ ಮೃತಪಟ್ಟಿದ್ದಾನೆ.
ಬಡಾವಣೆಯ ಹಿಂಭಾಗದ ಕೆರೆಯಲ್ಲಿ ಬಾಲಕ ಆಟವಾಡುತ್ತಿದ್ದ. ಈ ವೇಳೆ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದಾನೆ, ಇದನ್ನು ಕಂಡವರು ಆತನನ್ನು ನೀರಿನಿಂದ ಮೇಲೆತ್ತಿದ್ದಾರೆ. ನಂತರ ನಗರದ ಸರ್ಕಾರಿ ಉಪ ವಿಭಾಗ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ಮಾರ್ಗ ಮಧ್ಯದಲ್ಲಿ ಕೊನೆ ಉಸಿರು ಎಳೆದಿದ್ದಾನೆ.
ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.