
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕೊಳ್ಳೇಗಾಲ ವನ್ಯಜೀವಿ ವಲಯದ ಗುಂಡಾಲ್ ಜಲಾಶಯದಲ್ಲಿ ಭಾನುವಾರ ಹುಲಿಯ ಕಳೇಬರ ಪತ್ತೆಯಾಗಿದೆ.
‘ಅರಣ್ಯ ಇಲಾಖೆಯ ಸಿಬ್ಬಂದಿ ಗಸ್ತಿನಲ್ಲಿದ್ದಾಗ ಹುಲಿ ಕಳೇಬರ ಕಂಡುಬಂದಿದೆ. ಸುಮಾರು 5ರಿಂದ 6 ವರ್ಷ ಪ್ರಾಯದ ಗಂಡು ಹುಲಿ ಉರುಳಿಗೆ ಸಿಲುಕಿದ ಬಳಿಕ ಜಲಾಶಯದ ಬಳಿಗೆ ಬಂದು ಮೃತಪಟ್ಟಿರುವುದು ಮೇಲ್ನೋಟಕ್ಕೆ ತಿಳಿದು ಬಂದಿದೆ’ ಎಂದು ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಪತಿ ತಿಳಿಸಿದ್ದಾರೆ.
ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ (ಎನ್‌ಟಿಸಿಎ) ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್‌ಒಪಿ) ಪ್ರಕಾರ, ನಾಮನಿರ್ದೇಶನ ಸದಸ್ಯ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರ ನಾಮನಿರ್ದೇಶನ ಪ್ರತಿನಿಧಿ, ಪಶು ವೈದ್ಯಾಧಿಕಾರಿಗಳ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕಳೇಬರವನ್ನು ಸುಟ್ಟುಹಾಕಲಾಯಿತು ಎಂದು ಅಧಿಕಾರಿಗಳು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.