ADVERTISEMENT

ಶಾಸಕರ ಕಚೇರಿಯಲ್ಲಿ ಬುದ್ಧ ಪೂರ್ಣಿಮೆ ಆಚರಣೆ

​ಪ್ರಜಾವಾಣಿ ವಾರ್ತೆ
Published 12 ಮೇ 2025, 13:01 IST
Last Updated 12 ಮೇ 2025, 13:01 IST
ಸಂತೇಮರಹಳ್ಳಿ ಪ್ರವಾಸಿ ಮಂದಿರದ ಶಾಸಕರ ಕಚೇರಿಯಲ್ಲಿ ಸೋಮವಾರ ನಡೆದ ಬುದ್ಧ ಪೂರ್ಣಿಮೆ ಕಾರ್ಯಕ್ರಮದಲ್ಲಿ ಭಗವಾನ್ ಬುದ್ಧರ ಭಾವಚಿತ್ರಕ್ಕೆ ಪುಷ್ಪರ್ಚಾನೆ ಮಾಡಲಾಯಿತು
ಸಂತೇಮರಹಳ್ಳಿ ಪ್ರವಾಸಿ ಮಂದಿರದ ಶಾಸಕರ ಕಚೇರಿಯಲ್ಲಿ ಸೋಮವಾರ ನಡೆದ ಬುದ್ಧ ಪೂರ್ಣಿಮೆ ಕಾರ್ಯಕ್ರಮದಲ್ಲಿ ಭಗವಾನ್ ಬುದ್ಧರ ಭಾವಚಿತ್ರಕ್ಕೆ ಪುಷ್ಪರ್ಚಾನೆ ಮಾಡಲಾಯಿತು    

ಸಂತೇಮರಹಳ್ಳಿ: ಭಗವಾನ್ ಬುದ್ಧರ ತತ್ವ ಸಿದ್ಧಾಂತಗಳನ್ನು ಜೀವನದಲ್ಲಿ ಆಳವಡಿಸಿಕೊಂಡಾಗ ಮಾತ್ರ ಶಾಂತಿ ನೆಲೆಸಲು ಸಾಧ್ಯವಾಗುತ್ತದೆ ಎಂದು ಚಾಮುಲ್ ನಾಮ ನಿರ್ದೇಶಕ ಕಮರವಾಡಿ ರೇವಣ್ಣ ತಿಳಿಸಿದರು.

ಇಲ್ಲಿನ ಪ್ರವಾಸಿ ಮಂದಿರದಲ್ಲಿರುವ ಶಾಸಕರ ಕಚೇರಿಯಲ್ಲಿ ಸೋಮವಾರ ನಡೆದ ಬುದ್ಧ ಪೂರ್ಣಿಮೆ ಕಾರ್ಯಕ್ರಮದಲ್ಲಿ ಭಗವಾನ್ ಬುದ್ಧರ ಭಾವಚಿತ್ರಕ್ಕೆ ಪುಷ್ಪರ್ಚಾನೆ ಮಾಡಿ ಮಾತನಾಡಿದರು. ಬುದ್ಧ ಜಗತ್ತಿಗೆ ಬೆಳಕ ನೀಡಿದರು. ಅವರ ಜಯಂತಿಯನ್ನು ಎಲ್ಲೆಡೆ ಆಚರಣೆ ಮಾಡುತ್ತಿರುವುದು ಸಂತೋಷದ ವಿಚಾರವಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲಾಡಳಿತದಿಂದ ದೊಡ್ಡ ಮಟ್ಟದ ಕಾರ್ಯಕ್ರಮ ಆಯೋಜನೆ ಮಾಡಿ ಬುದ್ಧರ ವಿಚಾರಧಾರೆಗಳನ್ನು ಜನರಿಗೆ ತಿಳಿಸಬೇಕು. ವ್ಯಕ್ತಿಯ ವ್ಯಕ್ತಿತ್ವ ಬದಲಾವಣೆಯಾಗಲು ಭಗವಾನ್ ಬುದ್ಧರ ಧಮ್ಮ ಮೂಲ ಕಾರಣವಾಗಿದೆ ಎಂದು ಹೇಳಿದರು.

ಇತ್ತೀಚಿನ ದಿನಗಳಲ್ಲಿ ಯುವಕರು ದುಶ್ಚಟಗಳಿಗೆ ದಾಸರಾಗಿ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಭಗವಾನ್ ಬುದ್ಧರ ತತ್ವ ಸಿದ್ದಾಂತಗಳನ್ನು ಜೀವನದಲ್ಲಿ ಆಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ಮುಖಂಡರಾದ ಉಮ್ಮತ್ತೂರು ಶಿವಣ್ಣ, ಸಂತೇಮರಹಳ್ಳಿ ಪಶಿ, ಗಣಗನೂರು ನಾಗಯ್ಯ, ಹೆಗ್ಗವಾಡಿರಾಜಣ್ಣ, ಕೆ.ಪಿ.ಮಹದೇವಸ್ವಾಮಿ, ಜನ್ನೂರುಶೇಖರ್ ಹಾಜರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.