ಸಾಂದರ್ಭಿಕ ಚಿತ್ರ
– ಐ ಸ್ಟಾಕ್ ಚಿತ್ರ
ಕೊಳ್ಳೇಗಾಲ: ಇಲ್ಲಿನ ಆದರ್ಶ ನಗರ ಬಡಾವಣೆಯಲ್ಲಿ ಮನೆಯ ಬಾಗಿಲನ್ನು ಅಪರಿಚಿತ ದುಷ್ಕರ್ಮಿಗಳು ಹೊಡೆದು ಹಾಕಿ ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ನಗದನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.
ಬಡಾವಣೆಯ ನಿವಾಸಿ ವ್ಯಾಪಾರಿ ಮುಜಾಯಿದ್ ಪಾಷ ಅವರ ಮನೆಯಲ್ಲಿ ಕಳ್ಳತನ ನಡೆದಿದೆ. ಅವರು ಕುಟುಂಬ ಸಮೇತವಾಗಿ ಜೂನ್ 2ರಂದು ಕೇರಳ ಹೋಗಿದ್ದು, ವಾಪಸ್ಸು ಜೂನ್ 5ರಂದು ಮನೆಗೆ ಬಂದಾಗ ವಿಷಯ ತಿಳಿದಿದೆ. ಕಳ್ಳರು ಬಾಗಿಲನ್ನು ಮುರಿದು ಬೀರುವಿನಲ್ಲಿದ್ದ ಸುಮಾರು 70 ಗ್ರಾಂ ಚಿನ್ನಾಭರಣ ಹಾಗೂ ಬೆಳ್ಳಿ ಪದಾರ್ಥಗಳು, ₹1 ಸಾವಿರ ನಗದು ಕಳವು ಮಾಡಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದರು.
ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.