ADVERTISEMENT

ಹನೂರು: ಹಳ್ಳಕ್ಕೆ ಬಿದ್ದ ಬಸ್‌, ಹಲವರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2022, 10:11 IST
Last Updated 20 ಮಾರ್ಚ್ 2022, 10:11 IST
ಕಾಮಗೆರೆ ಬಳಿ ಶುಕ್ರವಾರ ಹಳ್ಳಕ್ಕೆ ಮಗುಚಿದ ಖಾಸಗಿ ಬಸ್‌
ಕಾಮಗೆರೆ ಬಳಿ ಶುಕ್ರವಾರ ಹಳ್ಳಕ್ಕೆ ಮಗುಚಿದ ಖಾಸಗಿ ಬಸ್‌   

ಹನೂರು: ಸಮೀಪದ ಕಾಮಗೆರೆ ಬಳಿ ಮಹದೇಶ್ವರ ಬೆಟ್ಟದಿಂದ ಕೊಳ್ಳೆಗಾಲಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದ್ದು ಬಸ್‌ನಲ್ಲಿದ್ದ 14ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಗಾಯಾಳುಗಳು ಕಾಮಗೆರೆಯ ಹೋಲಿಕ್ರಾಸ್ ಆಸ್ಪತ್ರೆ ಹಾಗೂ ಕೊಳ್ಳೇಗಾಲ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಮಹದೇಶ್ವರ ಖಾಸಗಿ ಬಸ್‌, ಕಾಮಗೆರೆ ಬಳಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದಾಗ ನಿಯಂತ್ರಣ ತಪ್ಪಿ ಹಳ್ಳಕ್ಕೆ ಮುಗುಚಿ ಬಿದ್ದಿದೆ. ಬಸ್‌ನಲ್ಲಿ60ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಈ ಪೈಕಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. 9 ಜನ ಕೊಳ್ಳೇಗಾಲ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಐವರು ಹೋಲಿಕ್ರಾಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ದ್ವಿಚಕ್ರ ವಾಹನ ಸವಾರನಿಗೂ ತಲೆಗೆ ಪೆಟ್ಟಾಗಿದ್ದು ಹೋಲಿಕ್ರಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹನೂರು ಶಾಸಕ ಆರ್.ನರೇಂದ್ರ ಹಾಗೂ ಬಿಜೆಪಿ ಮುಖಂಡ ದತ್ತೇಶ್ ಕುಮಾರ್ ಆಸ್ಪತ್ರೆಗೆ ತೆರಳಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.