ADVERTISEMENT

ಕೊಳ್ಳೇಗಾಲ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಬಸ್ ಡಿಕ್ಕಿ ಸಾವು

​ಪ್ರಜಾವಾಣಿ ವಾರ್ತೆ
Published 22 ಜನವರಿ 2024, 15:09 IST
Last Updated 22 ಜನವರಿ 2024, 15:09 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಕೊಳ್ಳೇಗಾಲ: ತಾಲ್ಲೂಕಿನ ಧನಗೆರೆ ಗ್ರಾಮದ ಮುಖ್ಯರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಅಸುನೀಗಿದ್ದಾರೆ.

ಗ್ರಾಮದ ದ್ಯಾವರಸ ನಾಯಕ ಮೃತ ವ್ಯಕ್ತಿ. ಇವರು ಭಾನುವಾರ ರಾತ್ರಿ 10 ಗಂಟೆ ಸಮಯದಲ್ಲಿ ರಸ್ತೆ ದಾಟುತ್ತಿದ್ದಾಗ ಎದುರುಗಡೆಯಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಈ ಸಂಬಂಧ ಠಾಣೆಯಲ್ಲಿ ದೂರು ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.