ಕೊಳ್ಳೇಗಾಲ (ಚಾಮರಾಜನಗರ ಜಿಲ್ಲೆ): ತಾಲ್ಲೂಕಿನ ಭರಚುಕ್ಕಿ ಜಲಪಾತದ ತುದಿಯಲ್ಲಿ ನಿಂತು ಸೆಲ್ಫಿ ತೆಗೆದುಕೊಳ್ಳಲು ಹೋಗಿದ್ದ ಹದಿನೈದಕ್ಕೂ ಹೆಚ್ಚು ಯುವಕರಿಗೆ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಗಣೇಶ್ ಬಸ್ಕಿ ಹೊಡೆಸಿ ಎಚ್ಚರಿಕೆ ನೀಡಿದ್ದಾರೆ.
ಜಲಪಾತದ ನೀರು ಧುಮ್ಮಿಕ್ಕುವ ಸ್ಥಳದ ಸಮೀಪವೇ ಬಂದು ನಿಂತು ಅಪಾಯಕಾರಿ ಸ್ಥಳದಲ್ಲಿ ಕೆಳಗಿಳಿಯುತ್ತಿದ್ದಾರೆಂಬ ಮಾಹಿತಿ ದೊರೆತ ಕೂಡಲೇ ಅಧಿಕಾರಿಯು ಯುವಕರನ್ನು ಹಿಂದಕ್ಕೆ ಕರೆಸಿ ಬಸ್ಕಿ ಹೊಡೆಸಿ, ‘ಫೋಟೊ ಹುಚ್ಚಿಗಾಗಿ ಪ್ರಾಣಕ್ಕೆ ಅಪಾಯ ತಂದುಕೊಳ್ಳಬೇಡಿ’ ಎಂದು ಬುದ್ಧಿವಾದ ಹೇಳಿ ಕಳಿಸಿದರು.
‘ಪ್ರವೇಶ ನಿಷೇಧಿಸಿದ ಸೂಚನಾ ಫಲಕವಿದ್ದರೂ ಯುವಕರು ಸೆಲ್ಫಿ ಹುಚ್ಚಿಗಾಗಿ ನದಿ ಸೇರಿದಂತೆ ಅನೇಕ ಜಲಪಾತದ ತುದಿಗೆ ಹೋಗುತ್ತಿದ್ದಾರೆ. ಹೀಗಾಗಿ ಯುವಕರಿಗೆ ಬುದ್ಧಿ ಹೇಳಿ ಬಸ್ಕಿ ಹೊಡೆಸಿ ಎಚ್ಚರಿಕೆ ನೀಡಲಾಗಿದೆ. ಘಟನೆಗಳು ಮರುಕಳಿಸಿದರೆ ಪ್ರಕರಣ ದಾಖಲಿಸಲಾಗುವುದು’ ಎಂದು ಅಧಿಕಾರಿಯು ‘ಪ್ರಜಾವಾಣಿ’ಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.