ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಲು ಆಗಮಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಳ್ಳಂಬೆಳಗ್ಗೆ ಮಾದಪ್ಪನ ದರ್ಶನ ಪಡೆದರು.
ಮಾದಪ್ಪನ ಸನ್ನಿಧಿಯಲ್ಲಿ ನಡೆಯುವ ಬೆಳಗಿನ ಪ್ರಾತಃಕಾಲದ ಮೊದಲ ಪೂಜೆಯಲ್ಲಿ ಭಾಗಿಯಾದ ಡಿ.ಕೆ.ಶಿವಕುಮಾರ್ ಅರ್ಧತಾಸು ದೇವರ ಮುಂದು ಕುಳಿತು ಧ್ಯಾನ ಮಾಡಿದರು.
ಮೊದಲ ಪೂಜೆಯಲ್ಲಿ ಭಾಗಿಯಾದರೆ ಇಷ್ಟಾರ್ಥ ನೆರವೇರುತ್ತೆ ಎಂಬ ನಂಬಿಕೆ ಈ ಭಾಗದಲ್ಲಿದೆ.
ಬಳಿಕ ದಂಡುಗೋಲು ಹೊತ್ತು ಹುಲಿ ವಾಹನ ಸೇವೆತ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ಮಾದಪ್ಪನ ಸನ್ನಿಧಿಯಲ್ಲಿ ಡಿ.ಕೆ.ಶಿವಕುಮಾರ್
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದ ಪೀಠಾಧ್ಯಕ್ಷ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಹದೇಶ್ವರ ಬೆಟ್ಟದಲ್ಲಿ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಮಾದಪ್ಪನ ಸನ್ನಿಧಿಯಲ್ಲಿ ಡಿ.ಕೆ.ಶಿವಕುಮಾರ್
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.