ಮಹದೇಶ್ವರ ಬೆಟ್ಟ (ಚಾಮರಾಜನಗರ ಜಿಲ್ಲೆ): ಇಲ್ಲಿ ಗುರುವಾರ (ಏ.24) ನಡೆಯಲಿರುವ ಸಚಿವ ಸಂಪುಟ ಸಭೆಗೆ ಮಾಡಿಕೊಂಡಿರುವ ಸಿದ್ಧತೆಗಳನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬುಧವಾರ ರಾತ್ರಿ ವೀಕ್ಷಿಸಿದರು.
ಬೆಟ್ಟದ ಪ್ರವೇಶ ದ್ವಾರದಲ್ಲಿ ಬುಧವಾರ ರಾತ್ರಿ ಈಡುಗಾಯಿ ಒಡೆದು ಪೂಜೆ ಸಲ್ಲಿಸಿದರು. ನಂತರ ದೀಪದಗಿರಿ ಒಡ್ದುವಿನಲ್ಲಿ ಹುಲಿಸವಾರಿ ಮಹದೇಶ್ವರ ಸ್ವಾಮಿಯ ಬೃಹತ್ ಪ್ರತಿಮೆಯನ್ನು ವೀಕ್ಷಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್, ಶಾಸಕ ಎಂ.ಆರ್. ಮಂಜುನಾಥ್, ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್, ಎಸ್ಪಿ ಕವಿತಾ, ಸಿಇಒ ಮೋನಾರೋತ್ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.