ಗುಂಡ್ಲುಪೇಟೆ: ಅಕ್ರಮವಾಗಿ ಕಸಾಯಿಖಾನೆಗೆ ಜಾನುವಾರು ಸಾಗಿಸುತ್ತಿದ್ದ ತಮಿಳುನಾಡಿನ ಮಸಣಿಗುಡಿಯ ವಿಜಯ್(29), ನವೀನ್(32), ನಂದಗೋಪಾಲ್(22)ಎಂಬುವರನ್ನು ತೆರಕಣಾಂಬಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳು ಬಲಚವಾಡಿ ಕಡೆಯಿಂದ ತೆರಕಣಾಂಬಿಹುಂಡಿ ಮಾರ್ಗವಾಗಿ ತಮಿಳುನಾಡಿನ ಕಸಾಯಿ ಖಾನೆಗೆ ಪಿಕ್ ಅಪ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದರು. ಸಬ್ ಇನ್ಸ್‌ಪೆಕ್ಟರ್ ಮಹೇಶ್ ಅವರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ, ಜಾನುವಾರು ಸಹಿತ ಮೂವರನ್ನು ಬಂಧಿಸಲಾಗಿದೆ.
ದಾಳಿಯಲ್ಲಿ ತೆರಕಣಾಂಬಿ ಠಾಣೆ ಪೇದೆಗಳಾದ ಬಂಗಾರನಾಯಕ, ಭಗೀರಥ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.