ಕೆ.ವೆಂಕಟೇಶ್, ಜಿಲ್ಲಾ ಉಸ್ತುವಾರಿ ಸಚಿವ
ಚಾಮರಾಜನಗರ: ಅರಣ್ಯ ಪ್ರದೇಶಕ್ಕೆದೊಳಗೆ ಜಾನುವಾರು ಮೇಯಿಸಲು ನಿಯಮಗಳಲ್ಲಿ ಅವಕಾಶವಿಲ್ಲ; ಆದರೆ, ಅರಣ್ಯದಂಚಿನಲ್ಲಿ ಮೇಯಿಸಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ತಿಳಿಸಿದರು.
ನಗರದಲ್ಲಿ ಬುಧವಾರ ಮಾತನಾಡಿದ ಸಚಿವರು ತಮಿಳುನಾಡಿನಿಂದ ಜಿಲ್ಲೆ ಪ್ರವೇಶಿಸುವ ಜಾನುವಾರುಗಳನ್ನು ನಿರ್ಬಂಧಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಹೊರರಾಜ್ಯಗಳ ಜಾನುವಾರುಗಳು ಬಾರದಂತೆ ಸ್ಥಳೀಯರು ಸಹಕಾರ ನೀಡಬೇಕು ಎಂದು ಸಚಿವರು ಮನವಿ ಮಾಡಿದರು.
ಈಚೆಗೆ ಜಿಲ್ಲೆಯ ಶಾಸಕರ ಜೊತೆಗೆ ಮುಖ್ಯಮಂತ್ರಿಗಳು ನಡೆಸಿದ ಸಭೆಯಲ್ಲಿ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಸ ಸಚಿವ ಸಂಪುಟ ಸಭೆಯ ನಿರ್ಣಯಗಳನ್ನು ಅನುಷ್ಠಾನಗೊಳಿಸಬೇಕು ಎಂದು ಮನವಿ ಸಲ್ಲಿಸಲಾಗಿದೆ. ಜಿಲ್ಲೆಯ ಅಭಿವೃದ್ಧಿ ವಿಚಾರವಾಗಿ ಚರ್ಚಿಸಿದ್ದೇವೆ ಎಂದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ದೂರವಿಟ್ಟು ಸಭೆ ನಡೆಸಿಲ್ಲ. ಅನ್ಯ ಕಾರ್ಯಕ್ರಮ ನಿಮಿತ್ತ ಗೈರಾಗಿದ್ದಾರೆ ಎಂದು ಸಚಿವರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.