ADVERTISEMENT

ಕಾವೇರಿ ಹೋರಾಟ: ಚಾಮರಾಜನಗರದಲ್ಲಿ ಕಡ್ಲೆಪುರಿ ಎರಚಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2023, 9:19 IST
Last Updated 17 ಅಕ್ಟೋಬರ್ 2023, 9:19 IST
<div class="paragraphs"><p>ಚಾಮರಾಜನಗರದ&nbsp;ನೃಪತುಂಗ‌ ವೃತ್ತದಲ್ಲಿ ಸೇರಿದ ಪ್ರತಿಭಟನಾನಿರತರು ಕಡ್ಲೆಪುರಿ ಎರಚಿ ಅಕ್ರೋಶ ವ್ಯಕ್ತಪಡಿಸಿದರು.</p></div>

ಚಾಮರಾಜನಗರದ ನೃಪತುಂಗ‌ ವೃತ್ತದಲ್ಲಿ ಸೇರಿದ ಪ್ರತಿಭಟನಾನಿರತರು ಕಡ್ಲೆಪುರಿ ಎರಚಿ ಅಕ್ರೋಶ ವ್ಯಕ್ತಪಡಿಸಿದರು.

   

ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ನಿಲ್ಲಿಸುವಂತೆ ಆಗ್ರಹಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ಮಂಗಳವರ ನಗರದಲ್ಲಿ ಕಡ್ಲೆಪುರಿ ಎರಚಿ ಪ್ರತಿಭಟನೆ ನಡೆಸಿದರು.

ನೃಪತುಂಗ‌ ವೃತ್ತದಲ್ಲಿ ಸೇರಿದ ಪ್ರತಿಭಟನಾನಿರತರು ಕಡ್ಲೆಪುರಿ ಎರಚಿ ಕೇಂದ್ರ ಸರ್ಕಾರ, ತಮಿಳುನಾಡು ಸರ್ಕಾರ, ಕರ್ನಾಟಕ ಸರ್ಕಾರ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ವಿರುದ್ದ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಸೇನಾಪಡೆ ಅಧ್ಯಕ್ಷ ಚಾ.ರಂ..ಶ್ರೀನಿವಾಸಗೌಡ ಮಾತನಾಡಿ, ‘ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಕ್ರಮವನ್ನು ಖಂಡಿಸಿ ನಿರಂತರವಾಗಿ ಹೋರಾಟ ಮಾಡುತ್ತಿದ್ದೇವೆ. ಕೇಂದ್ರ ಸರ್ಕಾರ, ಕರ್ನಾಟಕ ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ರಾಜ್ಯ ಪಾಲಿಗೆ ಸತ್ತುಹೋಗಿದೆ ಎಂದು ಕಡ್ಲೆಪುರಿ ಎರಚಿ ಪ್ರತಿಭಟನೆ ಮಾಡಲಾಗಿದೆ’ ಎಂದರು.

ಪಣ್ಯದಹುಂಡಿ ರಾಜು, ನಿಜದ್ವನಿ ಗೋವಿಂದರಾಜು, ಗು.ಪುರುಷೋತ್ತಮ್, ರಾಜಪ್ಪ, ತಾಂಡವಮೂರ್ತಿ,, ವೀರಭದ್ರ, ಸೋಮವಾರಪೇಟೆ ಮಂಜು ಇತರರು ಭಾಗವಹಿಸಿದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.