ADVERTISEMENT

ಕೊಳ್ಳೇಗಾಲ: ₹10 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ಅಭಿವೃದ್ಧಿ

ಕಾಮಗಾರಿ ವೀಕ್ಷಿಸಿದ ನಗರಸಭೆ ಅಧ್ಯಕ್ಷೆ ರೇಖಾ

​ಪ್ರಜಾವಾಣಿ ವಾರ್ತೆ
Published 10 ಜೂನ್ 2025, 14:28 IST
Last Updated 10 ಜೂನ್ 2025, 14:28 IST
ಕೊಳ್ಳೇಗಾಲ ನಗರಸಭೆ ವ್ಯಾಪ್ತಿಯ 15ನೇ ವಾರ್ಡ್‌ನ ಪೌರಕಾರ್ಮಿಕರ ಕಾಲೊನಿಯಲ್ಲಿ ಸಿ.ಸಿ. ರಸ್ತೆ ಕಾಮಗಾರಿಯನ್ನು ನಗರಸಭೆ ಅಧ್ಯಕ್ಷೆ ರೇಖಾ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು
ಕೊಳ್ಳೇಗಾಲ ನಗರಸಭೆ ವ್ಯಾಪ್ತಿಯ 15ನೇ ವಾರ್ಡ್‌ನ ಪೌರಕಾರ್ಮಿಕರ ಕಾಲೊನಿಯಲ್ಲಿ ಸಿ.ಸಿ. ರಸ್ತೆ ಕಾಮಗಾರಿಯನ್ನು ನಗರಸಭೆ ಅಧ್ಯಕ್ಷೆ ರೇಖಾ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು   

ಕೊಳ್ಳೇಗಾಲ: ನಗರಸಭೆ ವ್ಯಾಪ್ತಿಯ 15ನೇ ವಾರ್ಡ್‌ನ ಪೌರಕಾರ್ಮಿಕರ ಕಾಲೊನಿಯಲ್ಲಿ ₹10 ಲಕ್ಷ ವಿಶೇಷ ಅನುದಾನದಲ್ಲಿ 30 ಅಡಿ ಸಿ.ಸಿ. ರಸ್ತೆ ಕಾಮಗಾರಿಯನ್ನು ನಗರಸಭೆ ಅಧ್ಯಕ್ಷೆ ರೇಖಾ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.

ಬಳಿಕ ಮಾತನಾಡಿ, ‘ಕಾಲೊನಿಯಲ್ಲಿ 98 ಮೀಟರ್ ಉದ್ದ ಹಾಗೂ 5 ಮೀಟರ್ ಅಗಲದ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಈ ಕಾಮಗಾರಿಗೆ ಶಾಸಕರು ವಿಶೇಷ ಅನುದಾನ ಬಿಡುಗಡೆ ಮಾಡಿದ್ದಾರೆ. ಈ ಹಿಂದೆ ಈ ರಸ್ತೆಯಲ್ಲಿ 15ನೇ ಹಣಕಾಸು ಯೋಜನೆಯಡಿ ₹5 ಲಕ್ಷ ವೆಚ್ಚದಲ್ಲಿ ಚರಂಡಿ ನಿರ್ಮಾಣವಾಗಿದೆ. ಮತ್ತೊಂದು ಬದಿಯಲ್ಲಿ ಚರಂಡಿ ಹಾಗೂ ಡೆಕ್ ನಿರ್ಮಾಣಕ್ಕೆ ನಗರೋತ್ಥಾನ ಯೋಜನೆಯಡಿ ಸುಮಾರು ₹8 ಲಕ್ಷ ಅನುದಾನ ಬಿಡುಗಡೆಯಾಗಿದ್ದು ಶೀಘ್ರದಲ್ಲಿ ಕಾಮಗಾರಿ ನಡೆಯಲಿದೆ’ ಎಂದು ಹೇಳಿದರು. 

‘ಮುಂದಿನ ದಿನಗಳಲ್ಲಿ ಅಭಿವೃದ್ಧಿ ಕಾಣದ ವಾರ್ಡ್‌ಗಳಿಗೆ ಶಾಸಕರು ವಿಶೇಷ ಅನುದಾನ ತಂದು ಅಭಿವೃದ್ಧಿಗೆ ಆದ್ಯತೆ ನೀಡಲಿದ್ದಾರೆ’ ಎಂದರು.

ನಗರಸಭೆ ಸ್ಥಾಯಿ ಸಮಿತಿಯ ಅಧ್ಯಕ್ಷ ಸುರೇಶ್, ಸದಸ್ಯ ರಾಘವೇಂದ್ರ, ಸ್ವಾಮಿ ನಂಜಪ್ಪ, ಗ್ಯಾರಂಟಿಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಬಸ್ತೀಪುರ ರವಿ, ಮುಖಂಡ ರಮೇಶ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.