ADVERTISEMENT

ಕೊಳ್ಳೇಗಾಲ | ಸುನಿಲ್ ಬೋಸ್ ಗೆಲುವು: ನಗರಸಭಾ ಸದಸ್ಯರಿಂದ ಸಂಭ್ರಮಾಚರಣೆ

​ಪ್ರಜಾವಾಣಿ ವಾರ್ತೆ
Published 6 ಜೂನ್ 2024, 14:12 IST
Last Updated 6 ಜೂನ್ 2024, 14:12 IST
ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಗೆಲುವು ಸಾಧಿಸಿದ ಹಿನ್ನೆಲೆ ಕೊಳ್ಳೇಗಾಲದಲ್ಲಿ ನಗರಸಭಾ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರು ನಗರಸಭೆಯ ಮುಂದೆ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು
ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಗೆಲುವು ಸಾಧಿಸಿದ ಹಿನ್ನೆಲೆ ಕೊಳ್ಳೇಗಾಲದಲ್ಲಿ ನಗರಸಭಾ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರು ನಗರಸಭೆಯ ಮುಂದೆ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು   

ಕೊಳ್ಳೇಗಾಲ: ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಗೆಲುವು ಸಾಧಿಸಿದ ಹಿನ್ನೆಲೆ ನಗರಸಭಾ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರು ನಗರಸಭೆಯ ಮುಂದೆ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು.

ನಗರ ಸಭೆಯ ಮುಂದೆ ನಗರಸಭೆ ಮಾಜಿ ಅಧ್ಯಕ್ಷ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಎಸ್. ರಮೇಶ್ ನೇತೃತ್ವದಲ್ಲಿ ಸಮಾವೇಶಗೊಂಡ ನಗರಸಭಾ ಸದಸ್ಯರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಪರವಾಗಿ ಘೋಷಣೆ ಕೂಗಿದರು. ಈ ವೇಳೆ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸೂಚಿಸಿದರು. ನಂತರ, ಪಟಾಕಿ ಸಿಡಿಸಿ, ಸಾರ್ವಜನಿಕರಿಗೆ ಸಿಹಿ ಹಂಚಿದರು.

ಎಸ್. ರಮೇಶ್ ಮಾತನಾಡಿ, ಚಾಮರಾಜನಗರ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆ. ಸಚಿವ ಮಹದೇವಪ್ಪ ಅವರ ಪುತ್ರ ಸುನಿಲ್ ಬೋಸ್ ಅವರು ನೂತನ ಸಂಸದರಾಗಿದ್ದಾರೆ ಹಾಗಾಗಿ ನಗರಸಭಾ ಸದಸ್ಯರಿಂದ ಹಾಗೂ ಕ್ಷೇತ್ರದ ಜನರ ಪರವಾಗಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇವೆ. ನೂತನ ಸಂಸದರ ಮೇಲೆ ಸಾರ್ವಜನಿಕರು ಅನೇಕ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದು, ಈಡೇರಿಸುವ ಭರವಸೆ ಇದೆ. ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತರುವ ಮೂಲಕ ಜಿಲ್ಲೆಯನ್ನು ಮತ್ತಷ್ಟು ಅಭಿವೃದ್ಧಿ ಮಾಡಲು ಪಣತೊಡುತ್ತಾರೆ ಎಂಬ ವಿಶ್ವಾಸ ಇದೆ ಎಂದರು.

ADVERTISEMENT

ನಗರಸಭಾ ಸದಸ್ಯ ರಾಘವೇಂದ್ರ, ಮಂಜುನಾಥ್, ಶಾಂತರಾಜು, ಎ.ಪಿ ಶಂಕರ್, ಧರಣೇಶ್, ಮನೋಹರ್, ಮುಖಂಡ ಹರೀಶ್, ಪ್ರಭುಸ್ವಾಮಿ, ಜಗದೀಶ್, ನರಸಿಂಹ, ರಾಜಶೇಖರ್, ರಾಜೇಂದ್ರ, ಶ್ರೀಧರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.