ADVERTISEMENT

ಗುಂಡ್ಲುಪೇಟೆ: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಲಾರಿ ಪಲ್ಟಿ

​ಪ್ರಜಾವಾಣಿ ವಾರ್ತೆ
Published 15 ಮೇ 2025, 13:59 IST
Last Updated 15 ಮೇ 2025, 13:59 IST
ಗುಂಡ್ಲುಪೇಟೆ ತಾಲ್ಲೂಕಿನ ತೊಂಡವಾಡಿ ಗೇಟ್ ಸಮೀಪ ಲಾರಿ ಪಲ್ಟಿಯಾಗಿತ್ತು
ಗುಂಡ್ಲುಪೇಟೆ ತಾಲ್ಲೂಕಿನ ತೊಂಡವಾಡಿ ಗೇಟ್ ಸಮೀಪ ಲಾರಿ ಪಲ್ಟಿಯಾಗಿತ್ತು   

ಗುಂಡ್ಲುಪೇಟೆ: ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ–766ರ ತೊಂಡವಾಡಿ ಗೇಟ್ ಸಮೀಪ ಗುರುವಾರ ಬೆಳಿಗ್ಗೆ ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಲಾರಿ ಪಲ್ಟಿಯಾಗಿದೆ.

ಕೇರಳ ನೋಂದಣಿಯ 14 ಚಕ್ರದ ಭಾರಿ ಗಾತ್ರದ ಲಾರಿ ಮೈಸೂರಿನಿಂದ ಸುಲ್ತಾನ್ ಬತ್ತೇರಿಗೆ ರಾಷ್ಟ್ರೀಯ ಹೆದ್ದಾರಿ-766ರಲ್ಲಿ ತೆರಳುತ್ತಿದ್ದಾಗ ರಸ್ತೆಯ ಬದಿ ನಿರ್ಮಿಸಿದ್ದ ಸೇತುವೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಹಳ್ಳಕ್ಕೆ ಬಿದ್ದಿದೆ. ಚಾಲಕ ಹಾಗೂ ಸಹಾಯಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.

ಬೇಗೂರು ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದರು. ಲಾರಿ ಮುಂಭಾಗ ಸಂಪೂರ್ಣ ಜಖಂ ಆಗಿದ್ದು, ಬೇರೊಂದು ಲಾರಿ ಕರೆಸಿ ಸಿಮೆಂಟ್ ಮೂಟೆಗಳನ್ನು ತುಂಬಿ ಸ್ಥಳಾಂತರಿಸಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.