ಕೊಳ್ಳೇಗಾಲ: ತಾಲ್ಲೂಕಿನ ಸಿಲ್ಕಲ್‍ಪುರ ಗ್ರಾಮದ ಬೆಳಿಗ್ಗೆ ವಾಯುವಿಹಾರ ಮಾಡುತ್ತಿದ್ದಾಗ ಗೃಹಿಣಿಯನ್ನು ಅಡ್ಡಗಟ್ಟಿದ ಇಬ್ಬರು ವ್ಯಕ್ತಿಗಳು ಚಾಕು ತೋರಿಸಿ ಕುತ್ತಿಗೆಯಲ್ಲಿದ್ದ ಚಿನ್ನದ ಮಾಂಗಲ್ಯ ಸರವನ್ನು ದೋಚಿ ಪರಾರಿಯಾಗಿದ್ದಾರೆ.
ಸಿಲ್ಕಲ್‍ಪುರ ಗ್ರಾಮದ ಕುಮಾರಸ್ವಾಮಿ ಪತ್ನಿ ಕನಕ 40 ಗ್ರಾಂ ಮಾಂಗಲ್ಯ ಸರವನ್ನು ಕಳೆದುಕೊಂಡವರು.
ಇವರು ಗ್ರಾಮದಿಂದ ಹೊಸಮಾಲಂಗಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಚಾನಲ್ ರಸ್ತೆಯಲ್ಲಿ ಮುಂಜಾನೆ ಬೆಳಿಗ್ಗೆ 6.30 ರ ಸಮಯದಲ್ಲಿ ವಾಕಿಂಗ್ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಟಗರಪುರ ಕಡೆಯಿಂದ ಕಾರಿನಲ್ಲಿ ಬಂದ ಇಬ್ಬರು ಮಹಿಳೆಗೆ ಚಾಕುವನ್ನು ತೋರಿಸಿ ಕುತ್ತಿಗೆಯಲ್ಲಿದ್ದ ಮಾಂಗಲ್ಯ ಸರವನ್ನು ಕಿತ್ತು ಕೊಂಡು ಪರಾರಿಯಾಗಿದ್ದಾರೆ. ಮುಖಕ್ಕೆ ಇಬ್ಬರು ಬಟ್ಟೆ ಕಟ್ಟಿಕೊಂಡಿದ್ದರು.
ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.