ADVERTISEMENT

ಚಾಮರಾಜನಗರ: ಜನೌಷಧಿ ಕೇಂದ್ರ ಸ್ಥಳಾಂತರ ಆದೇಶ ಹಿಂಪಡೆಯಲು ಮನವಿ

​ಪ್ರಜಾವಾಣಿ ವಾರ್ತೆ
Published 7 ಜೂನ್ 2025, 14:32 IST
Last Updated 7 ಜೂನ್ 2025, 14:32 IST
ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ತೆರವುಗೊಳಿಸುವ ರಾಜ್ಯ ಸರ್ಕಾರದ ಆದೇಶ ಹಿಂಪಡೆಯಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಘಟಕದ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರಿಗೆ ಮನವಿ ಸಲ್ಲಿಸಲಾಯಿತು
ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ತೆರವುಗೊಳಿಸುವ ರಾಜ್ಯ ಸರ್ಕಾರದ ಆದೇಶ ಹಿಂಪಡೆಯಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಘಟಕದ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರಿಗೆ ಮನವಿ ಸಲ್ಲಿಸಲಾಯಿತು   

ಚಾಮರಾಜನಗರ: ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ತೆರವುಗೊಳಿಸುವ ರಾಜ್ಯ ಸರ್ಕಾರದ ಆದೇಶ ಹಿಂಪಡೆಯಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಕುಮಾರ್ ಶೆಟ್ಟಿ ಬಣ) ತಾಲ್ಲೂಕು ಘಟಕದ ವತಿಯಿಂದ ಶುಕ್ರವಾರ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರ ಮೂಲಕ ಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವರಿಗೆ ಮನವಿ ಸಲ್ಲಿಸಲಾಯಿತು.

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಜನೌಷಧ ಕೇಂದ್ರಗಳಲ್ಲಿ ಬಡವರು ಹಾಗೂ ಮದ್ಯಮ ವರ್ಗದವರಿಗೆ ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಔಷಧಗಳು ದೊರೆಯುತ್ತಿವೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಕೊರತೆಯಾದಾಗ ಜನೌಷಧ ಕೇಂದ್ರಗಳಲ್ಲಿ ಕಡಿಮೆ ದರದಲ್ಲಿ ಔಷಧಗಳು ದೊರೆಯುತ್ತಿತ್ತು.

ಇದೀಗ ಜನೌಷಧ ಕೇಂದ್ರಗಳನ್ನು ಬಂದ್ ಮಾಡಿಸಿದರೆ ಬಡವರು ದುಬಾರಿ ದರ ಕೊಟ್ಟು ಖಾಸಗಿ ಔಷಧ ಅಂಗಡಿಗಳಲ್ಲಿ ಖರೀದಿಸಬೇಕಾಗುತ್ತದೆ. ಜನೌಷಧಿ ಕೇಂದ್ರಗಳನ್ನು ತೆರವುಗೊಳಿಸುವ ಆದೇಶವನ್ನು ಸರ್ಕಾರ ಹಿಂಪಡೆಯಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದರು.

ADVERTISEMENT

ಕರವೇ ತಾಲ್ಲೂಕು ಘಟಕದ ಅಧ್ಯಕ್ಷ ನವೀನ್ ಕ್ವಾಲಿಟಿ, ಪ್ರಧಾನ ಕಾರ್ಯದರ್ಶಿ ಅರ್ಜುನ್, ಉಪಾಧ್ಯಕ್ಷ ಅವಿನಾಶ್, ಉಮೇಶ್, ಕಾರ್ಮಿಕ ಘಟಕದ ಅಧ್ಯಕ್ಷ ಹರೀಶ್ ನಾಯಕ್, ನಗರ ಅಧ್ಯಕ್ಷ ಮಹೇಂದರ್, ನವೀನ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.