ADVERTISEMENT

ಗುಂಡ್ಲುಪೇಟೆ: ಆತ್ಮಹತ್ಯೆಗೆ ಯತ್ನಿಸಿದ ಬಿಲ್ ಕಲೆಕ್ಟರ್

​ಪ್ರಜಾವಾಣಿ ವಾರ್ತೆ
Published 24 ಜೂನ್ 2023, 7:17 IST
Last Updated 24 ಜೂನ್ 2023, 7:17 IST
ಬಿಲ್ ಕಲೆಕ್ಟರ್ ಸುರೇಶ್.
ಬಿಲ್ ಕಲೆಕ್ಟರ್ ಸುರೇಶ್.   

ಗುಂಡ್ಲುಪೇಟೆ: ತಾಲ್ಲೂಕಿನ ಕೂತನೂರು ಗ್ರಾಮ ಪಂಚಾಯಿತಿ ಬಿಲ್‌ ಕಲೆಕ್ಟರ್‌ ಸುರೇಶ್‌ (34) ಅವರು ಶುಕ್ರವಾರ ಡೆತ್ ನೋಟ್ ಬರೆದಿಟ್ಟು ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾರೆ. 

ಗ್ರಾಮ ಪಂಚಾಯಿತಿ ಆಡಳಿತ ಮತ್ತು ಅಧಿಕಾರಿ, ನೌಕರರ ನಡುವೆ ಈ ಹಿಂದೆ ಗಲಾಟೆ ನಡೆದಿತ್ತು. ಈ ವಿಷಯವಾಗಿ ನಿರ್ಣಯ ಕೈಗೊಳ್ಳುವ ಸಂಬಂಧ ಶುಕ್ರವಾರ ಗ್ರಾಮ ಪಂಚಾಯಿತಿಯಲ್ಲಿ ಸಭೆ ಆಯೋಜಿಸಲಾಗಿತ್ತು. ಈ ವೇಳೆ ಅಭಿವೃದ್ಧಿ ಅಧಿಕಾರಿ ಮತ್ತು ಬಿಲ್ ಕಲೆಕ್ಟರ್ ನಡವಳಿಕೆಗಳ ಬಗ್ಗೆ ವಿಷಯ ಚರ್ಚೆಯಾಗಿದೆ ಎಂದು ಹೇಳಲಾಗಿದೆ.

ಸಭೆ ನಡೆಯುತ್ತಿರುವಾಗಲೇ ಹೊರಬಂದ ಸುರೇಶ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣವೇ ಅವರನ್ನು ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ADVERTISEMENT

ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿಲ್ಲ.

‘ನನ್ನ ಸಾವಿಗೆ ಗ್ರಾಮ ಪಂಚಾಯಿತಿ ಸದಸ್ಯ ಗೋಪಾಲ ಶೆಟ್ಟಿ ಮತ್ತು ಉಪಾಧ್ಯಕ್ಷರ ಪುತ್ರ ಪ್ರಕಾಶ್ ಕಾರಣ. ಇವರು ನನಗೆ ಮಾನಸಿಕ ಕಿರುಕುಳ ನೀಡುತ್ತಿದ್ದರು. ನನ್ನನ್ನು ಕೆಲಸದಿಂದ ವಜಾ ಮಾಡಿಸಲು ಪ್ರಯತ್ನಿಸುತ್ತಿದ್ದಾರೆ. ಹಿಂದೆಯೂ ಇವರಿಂದ ನನಗೆ ಕಿರುಕುಳವಾಗಿದೆ. ಈ ಕಾರಣ ನಾನು ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆ. ನನ್ನ ಮಗು ಮತ್ತು ಪತ್ನಿಗೆ ನ್ಯಾಯ ಒದಗಿಸಿ’ ಎಂದು ಸುರೇಶ್ ಡೆತ್ ನೋಟ್‍ನಲ್ಲಿ ಬರೆದಿದ್ದಾರೆ.

ಘಟನೆಯ ಬಳಿಕ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಕಂಠರಾಜೇಅರಸ್ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದರು.

ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ಶ್ರೀಕಂಠರಾಜೇಅರಸ್‌ ಅವರಿಗೆ ಕರೆ ಮಾಡಿದರೂ ಸಂಪರ್ಕ ಸಾಧ್ಯವಾಗಲಿಲ್ಲ. 

ಬರೆದಿರುವ ಡೆತ್ ನೋಟ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.