ಚಾಮರಾಜನಗರ: ರಾಜ್ಯ ಪೌರ ಕಾರ್ಮಿಕರ ಮಹಾ ಸಂಘದ ವತಿಯಿಂದ ಮಹದೇಶ್ವರ ಬೆಟ್ಟದಲ್ಲಿ ಅ.20ರಂದು ಹಮ್ಮಿಕೊಂಡಿದ್ದ ಪೌರಕಾರ್ಮಿಕರ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷ ಡಿ.ಆರ್.ರಾಜು ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರ ಜೊತೆಗಿನ ಸಭೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಪೌರ ಕಾರ್ಮಿಕರ ಬೇಡಿಕೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂಪಡೆಯಲಾಗಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿಗಳು ನೀಡಿರುವ ಭರವಸೆಯಂತೆ ಕಾಲಮಿತಿಯಲ್ಲಿ ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಬೇಕು, ಇಲ್ಲವಾದಲ್ಲಿ ಪೌರ ಕಾರ್ಮಿಕರು ಸ್ವಚ್ಛತಾ ಕಾರ್ಯಗಳನ್ನು ಸ್ಥಗಿತಗೊಳಿಸಲಿದ್ದು ಮಹದೇಶ್ವರ ಬೆಟ್ಟದ ದೊಡ್ಡ ಗೋಪುರದ ಮುಂಭಾಗ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭ ಸಮಿತಿ ಅಧ್ಯಕ್ಷ ಬ್ಯಾಂಕ್ ರಂಗಣ್ಣ, ಆದಿ ದ್ರಾವಿಡ ಸಂಘದ ರಾಜ್ಯಾಧ್ಯಕ್ಷ ಶಿವ ಶ್ರೀನಿವಾಸ, ಗೌರವಾಧ್ಯಕ್ಷ ಪಿ.ಮಂಜುನಾಥ್, ಗೌರವ ಸಲಹೆಗಾರ ಸಿ.ಆರ್.ವಿಜಯ್, ಮಹಾದೇವ್, ಉಸ್ತುವಾರಿ ಅಧ್ಯಕ್ಷ ಆರ್.ಜಿ ಅಶೋಕ್, ಪ್ರಧಾನ ಕಾರ್ಯದರ್ಶಿ ದಿನೇಶ್ ಕುಮಾರ್, ಜಿಲ್ಲಾ ಅಧ್ಯಕ್ಷ ಹೊನ್ನೂರು ಆರ್ಮುಗಂ, ಮಹದೇಶ್ವರ ಬೆಟ್ಟದ ಶಾಖಾ ಅಧ್ಯಕ್ಷ ನಾಗೇಂದ್ರ, ಕಾರ್ಯದರ್ಶಿ ಮರದ ಮುತ್ತು, ಖಜಾಂಚಿ ರಂಜಿತ್ ಕುಮಾರ್, ಮುಖಂಡರಾದ ಪ್ರಭಾಕರ್, ಶರವಣ, ನಾಗರಾಜು, ಕುರಿಮಂಡಿ ಕುಮಾರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.