ADVERTISEMENT

ಚಾಮರಾಜನಗರ | ರೈತರ ಅರ್ಜಿಗಳು ಚೆಲ್ಲಾಪಿಲ್ಲಿ: ಆಕ್ರೋಶ

​ಪ್ರಜಾವಾಣಿ ವಾರ್ತೆ
Published 14 ಜುಲೈ 2024, 0:13 IST
Last Updated 14 ಜುಲೈ 2024, 0:13 IST
ಚಾಮರಾಜನಗರ ಜಿಲ್ಲಾಡಳಿತ ಭವನದ ಪ್ರವೇಶದ್ವಾರದ ಮುಂದೆ ಪ್ರತಿಭಟನೆ ನಡೆಸಲು ಹೊರಟಿದ್ದ ಕಬ್ಬು ಬೆಳೆಗಾರರನ್ನು ಪೊಲೀಸರು ಭವನದ ಮುಂಭಾಗ ತಡೆದರು. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿ ರೈತರು ರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದರು
ಚಾಮರಾಜನಗರ ಜಿಲ್ಲಾಡಳಿತ ಭವನದ ಪ್ರವೇಶದ್ವಾರದ ಮುಂದೆ ಪ್ರತಿಭಟನೆ ನಡೆಸಲು ಹೊರಟಿದ್ದ ಕಬ್ಬು ಬೆಳೆಗಾರರನ್ನು ಪೊಲೀಸರು ಭವನದ ಮುಂಭಾಗ ತಡೆದರು. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿ ರೈತರು ರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದರು   

ಚಾಮರಾಜನಗರ: ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜುಲೈ 10ರಂದು ನಡೆದಿದ್ದ ಕಾಂಗ್ರೆಸ್‌ ಕೃತಜ್ಞತಾ ಸಮಾವೇಶದಲ್ಲಿ ರೈತರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ್ದ ಮನವಿ ಪತ್ರಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆಯೇ, ರಾಜ್ಯ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಜಿಲ್ಲಾಡಳಿತದ ಮುಂಭಾಗ ಶನಿವಾರ ಧರಣಿ ನಡೆಸಿದ ರೈತರು ತ್ಯಾಜ್ಯದ ಬುಟ್ಟಿಗಳನ್ನು ಪ್ರದರ್ಶಿಸಿ ಅಸಮಾಧಾನ ಹೊರಹಾಕಿದರು. ‘ಮುಖ್ಯಮಂತ್ರಿ ಕ್ಷಮೆಯಾಚಿಸಬೇಕು’ ಎಂದು ಆಗ್ರಹಿಸಿದರು.

ಕೆಂಪೇಗೌಡ ಜಯಂತಿಯಲ್ಲಿ ಭಾಗವಹಿಸಲು ಬಂದ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರನ್ನು ಅಡ್ಡಗಟ್ಟಿದ ರೈತರು, ‘ಮನವಿ ಪತ್ರಗಳನ್ನು ಬಿಸಾಡುವ ಮೂಲಕ ಸರ್ಕಾರ ರೈತ ವಿರೋಧಿ ನಡೆ ಅನುಸರಿಸುತ್ತಿದೆ’ ಎಂದು ಆರೋಪಿಸಿದರು.

ADVERTISEMENT

ಪ್ರತಿಕ್ರಿಯಿಸಿದ ಸಚಿವರು, ‘ಮುಖ್ಯಮಂತ್ರಿಯವರು ಉದ್ದೇಶಪೂರ್ವಕವಾಗಿ ರೈತರ ಮನವಿಗಳನ್ನು ಕಸದ ಬುಟ್ಟಿಗೆ ಬಿಸಾಡಿ ಹೋಗಿರಲು ಸಾಧ್ಯವೇ ಇಲ್ಲ. ಜನಜಂಗುಳಿಯ ಮಧ್ಯೆ ಮರೆತು ಬಿಟ್ಟು ಹೋಗಿರಬಹುದು. ಘಟನೆಯ ಬಗ್ಗೆ ಪರಿಶೀಲಿಸಲಾಗುವುದು. ಮುಖ್ಯಮಂತ್ರಿಯವರ ಗಮನಕ್ಕೆ ತರಲಾಗುವುದು’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.