ADVERTISEMENT

ಚಾಮರಾಜನಗರ | ‘ಕ್ಷಣಿಕ ಸುಖಕ್ಕೆ ಜೀವನ ಹಾಳು ಮಾಡಿಕೊಳ್ಳದಿರಿ’

ಜಿಲ್ಲಾ ಕಾರಾಗೃಹದಲ್ಲಿ ಹೆಚ್.ಐ.ವಿ ಜಾಗೃತಿ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2025, 4:55 IST
Last Updated 5 ಡಿಸೆಂಬರ್ 2025, 4:55 IST
ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ನಗರದ ಜಿಲ್ಲಾ ಕಾರಾಗೃಹದಲ್ಲಿರುವ ವಿಚಾರಣಾಧೀನ ಕೈದಿ ಹಾಗೂ ಸಿಬ್ಬಂದಿಗೆ ಹೆಚ್.ಐವಿ ಹಾಗೂ ಏಡ್ಸ್ ಕುರಿತು ಜಾಗೃತಿ, ಅರಿವು ಕಾರ್ಯಕ್ರಮ ನಡೆಯಿತು
ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ನಗರದ ಜಿಲ್ಲಾ ಕಾರಾಗೃಹದಲ್ಲಿರುವ ವಿಚಾರಣಾಧೀನ ಕೈದಿ ಹಾಗೂ ಸಿಬ್ಬಂದಿಗೆ ಹೆಚ್.ಐವಿ ಹಾಗೂ ಏಡ್ಸ್ ಕುರಿತು ಜಾಗೃತಿ, ಅರಿವು ಕಾರ್ಯಕ್ರಮ ನಡೆಯಿತು   

ಚಾಮರಾಜನಗರ: ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಜಿಲ್ಲಾ ಕಾರಾಗೃಹ ಹಾಗೂ ಸ್ವಾಮಿ ವಿವೇಕಾನಂದ ಯೂತ್‌ ಮೂವ್‌ಮೆಂಟ್ ಸಹಯೋಗದಲ್ಲಿ ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ನಗರದ ಜಿಲ್ಲಾ ಕಾರಾಗೃಹದಲ್ಲಿರುವ ವಿಚಾರಣಾಧೀನ ಕೈದಿ ಹಾಗೂ ಸಿಬ್ಬಂದಿಗೆ ಎಚ್ಐವಿ ಹಾಗೂ ಏಡ್ಸ್ ಕುರಿತು ಜಾಗೃತಿ, ಅರಿವು ಕಾರ್ಯಕ್ರಮ ನಡೆಯಿತು.

ಹಿರಿಯ ಸಿವಿಲ್ ನ್ಯಾಯಾಧೀಶ ಈಶ್ವರ್ ಕಾರ್ಯಕ್ರಮ ಉದ್ಘಾಟಿಸಿ, ಪ್ರತಿಜ್ಞಾ ವಿಧಿ ಬೋಧಿಸಿ ಎಚ್ಐವಿ ಹಾಗೂ ಏಡ್ಸ್ ಹರಡುವಿಕೆ ಹಾಗೂ ರೋಗದ ದುಷ್ಪರಿಣಾಮಗಳ ಕುರಿತು ವಿವರ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಸ್.ಚಿದಂಬರ ಮಾತನಾಡಿ, ‘ಎಚ್‌ಐವಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದು ಹಾಗೂ ಅರಿವಿದ್ದವರೂ ರೋಗಕ್ಕೆ ತುತ್ತಾಗುತ್ತಿರುವುದು ಕಳವಳಕಾರಿ ವಿಚಾರವಾಗಿದೆ. ಕ್ಷಣಿಕ ಸುಖಕ್ಕೆ ಜೀವನವನ್ನು ಹಾಳ ಮಾಡಿಕೊಳ್ಳಬಾರದು.  ಎಚ್.ಐ.ವಿ, ಏಡ್ಸ್ ಹರಡುವಿಕೆಯ ಬಗ್ಗೆ ಸಾರ್ವಜನಿಕರಿಗೆ ತಿಳಿವಳಿಕೆ ಮೂಡಿಸುವುದು ಅಗತ್ಯ. ಸೋಂಕಿತರಿಗೆ ಸರ್ಕಾರವೇ ಉಚಿತವಾಗಿ ಚಿಕಿತ್ಸೆ ನೀಡಲಿದೆ’ ಎಂದರು.

ADVERTISEMENT

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾರಾಗೃಹದ ಅಧೀಕ್ಷಕ ಎನ್.ಎಸ್.ಶಿವಕುಮಾರ್, ‘ಸ್ಪರ್ಧಾತ್ಮಕ ಯುಗದಲ್ಲಿ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸಬೇಕು. ವಿಶೇಷವಾಗಿ ಯುವಜನರು ಒಳ್ಳೆಯ ಹವ್ಯಾಸ ರೂಢಿಸಿಕೊಂಡು ಉತ್ತಮ ಜೀವನ ಶೈಲಿ ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಇದೇ ವೇಳೆ ಅನಿಕೇತನ ರಂಗ ಕಲಾತಂಡದಿಂದ ಜಾಗೃತಿ ಮೂಡಿಸುವ ಬೀದಿನಾಟಕ ಪ್ರದರ್ಶಿಸಲಾಯಿತು. ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಶ್ರೀನಿವಾಸ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ದೊರೆಸ್ವಾಮಿ ನಾಯಕ್, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕದ ಮೇಲ್ವಿಚಾರಕ ಎನ್.ಜೆ.ಮಹದೇವ ಪ್ರಸಾದ್, ಸಂಯೋಜಕ ರವಿಕುಮಾರ್, ಕೂರ್ಗ್ ಸಂಪರ್ಕ ಕಾರ್ಯಕರ್ತರು ಯೋಜನೆಯ ಸಂಯೋಜಕರಾದ ಸುರೇಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.