
ಪ್ರಜಾವಾಣಿ ವಾರ್ತೆ
ಚಾಮರಾಜನಗರ: ನಗರದ ಮೂರು ಪರೀಕ್ಷಾ ಕೇಂದ್ರಗಳಲ್ಲಿ ವೈದ್ಯಕೀಯ ಕೋರ್ಸ್ ಪ್ರವೇಶಕ್ಕಾಗಿ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್) ಭಾನುವಾರ ಯಶಸ್ವಿಯಾಗಿ ನಡೆಯಿತು.
799 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 20 ಮಂದಿ ಗೈರಾಗಿದ್ದು, 779 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.
‘ಮೂರು ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, ಅಡೆತಡೆಗಳು ಉಂಟಾಗಿಲ್ಲ’ ಎಂದು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲ ಪ್ರಸಾದ್ ‘ಪ್ರಜಾವಾಣಿ’ಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.