ಚಾಮರಾಜನಗರ: ಆಮ್ಲಜನಕ ಇಲ್ಲದ ಅವಧಿಯಲ್ಲಿ ಮೂವರು ಮಾತ್ರ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೋಮವಾರ ತಿಳಿಸಿದ್ದಾರೆ.
ಕಳೆದ 24 ಗಂಟೆಗಳಲ್ಲಿ 24 ಜನರು ಸಾವನ್ನಪ್ಪಿದ್ದಾರೆ. ಅವರಲ್ಲಿ ಕೇವಲ ಮೂವರು ಮಾತ್ರ (ಬೆಳಿಗ್ಗೆ 12 ರಿಂದ 3ರವರೆಗೆ ) ಆಮ್ಲಜನಕದ ಕೊರತೆಯಿಂದಾಗಿ ಮೃತಪಟ್ಟಿದ್ದಾರೆ ಎಂದು ವೈದ್ಯರ ಪ್ರಾಥಮಿಕ ಮಾಹಿತಿಯಲ್ಲಿ ತಿಳಿಸಿದ್ದಾರೆ ಎಂದು ಸಚಿವ ಕೆ.ಸುಧಾಕರ್ ತಿಳಿಸಿದ್ದಾರೆ.
ಘಟನೆ ಸಂಬಂಧ ತನಿಖೆ ನಡೆಯುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.