ಚಾಮರಾಜನಗರ: ಲೋಕೋಪಯೋಗಿ ಇಲಾಖೆಯಿಂದ ₹2 ಕೋಟಿ ವೆಚ್ಚದಲ್ಲಿ ತಾಲ್ಲೂಕಿನ ಬೇಡರಪುರ ಕ್ರಾಸ್‌ನಿಂದ ಬೆಂಡರವಾಡಿ ಸೇರಿದಂತೆ ಹಲವು ಭಾಗಗಳನ್ನು ಸಂಪರ್ಕಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಪುಟ್ಟರಂಗಶೆಟ್ಟಿ ಈಚೆಗೆ ಚಾಲನೆ ನೀಡಿದರು.
‘ಗ್ರಾಮೀಣ ರಸ್ತೆ ಮತ್ತು ಸಂಪರ್ಕ ರಸ್ತೆಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ. ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಗ್ರಾಮಗಳಲ್ಲಿ ರಸ್ತೆ, ಕುಡಿಯುವ ನೀರು, ಸಮುದಾಯ ಭವನ , ಜನರ ಬೇಡಿಕೆಗೆ ಅನುಗುಣವಾಗಿ ಅಭಿವೃದ್ಧಿ ಕಾಮಗಾರಿ ಮಾಡಲಾಗುತ್ತಿದೆ ಎಂದರು. ‘ಗುಣಮಟ್ಟ ಕಾಯ್ದುಕೊಳ್ಳಬೇಕು’ ಎಂದು ಗುತ್ತಿಗೆದಾರರಿಗೆ ಸೂಚಿಸಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಮಲ್ಲೇಶ್, ಸದಸ್ಯರಾದ ಮಹದೇವಸ್ವಾಮಿ, ಮಲ್ಲು, ಚಂದ್ರು, ಎಸ್‌ಡಿಎಂಸಿ ಅಧ್ಯಕ್ಷ ಮಹೇಶ್, ಮುಖಂಡರಾದ ಮಲ್ಲಪ್ಪ, ಶಿವಮಲ್ಲು, ನಾರಾಯಣ್, ಮಲ್ಲೇಶ್, ಶಿವರಾಜು, ಎಸ್‌ಪಿಕೆ ಉಮೇಶ್ ,ಗ್ರಾಮದ ಮುಖಂಡರು ಗ್ರಾಮಸ್ಥರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.