ಹನೂರು: ತಾಲ್ಲೂಕಿನ ಕೊಪ್ಪ ಗ್ರಾಮದ ಜಮೀನಿನಲ್ಲಿ ಮೇಕೆಗಳನ್ನು ಮೆಯಿಸುತ್ತಿದ್ದ ಮಾದೇವ ಎಂಬುವವರ ಮೇಲೆ ಆನೆ ದಾಳಿ ದಾಳಿ ಮಾಡಿದ್ದು ಅವರ ಕಾಲು ಮುರಿದಿದೆ.
ಅರಣ್ಯ ಸಮೀಪದ ಜಮೀನಿನಲ್ಲಿ ಮೇಕೆಗಳನ್ನು ಮೇಯಿಸುತ್ತಿದ್ದಾಗ ಆನೆ ದಾಳಿ ಮಾಡಿದೆ. ಇದನ್ನು ಗಮನಿಸಿದ ಸ್ಥಳೀಯರು ಅರಣ್ಯ ಇಲಾಖೆ ಸಿಬ್ಬಂದಿಯ ತಿಳಿಸಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆ ಸಿಬ್ಬಂದಿ ‘ನಾವು ಹೊರಗಡೆ ಇದ್ದೇವೆ ನೀವು ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ’ ಎಂದು ಹೇಳಿದ್ದಾರೆ. ನಂತರ ರೈತರು ಗಾಯಗೊಂಡ ಮಾದೇವ ಅವರನ್ನು ಕೂಡ್ಲೂರು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ತಮಿಳುನಾಡಿನ ಸಿಂಗರಿಪಾಳ್ಯಕ್ಕೆ ಕರೆದೊಯ್ಯಲಾಗಿದೆ ಎಂದು ಕಿಸಾನ್ ಸಂಘದ ಘಟಕದ ಅಧ್ಯಕ್ಷ ನಾಗರಾಜು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.