ADVERTISEMENT

13 ವರ್ಷದ ಬಾಲಕಿ ಗರ್ಭಿಣಿ; ಯುವಕನ ಬಂಧನ

​ಪ್ರಜಾವಾಣಿ ವಾರ್ತೆ
Published 2 ಜೂನ್ 2023, 16:12 IST
Last Updated 2 ಜೂನ್ 2023, 16:12 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಯಳಂದೂರು: ತಾಲ್ಲೂಕಿನ ಗ್ರಾಮವೊಂದರ 13 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಯುವಕನನ್ನು ಪಟ್ಟಣ ಠಾಣೆಯ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. 

ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವ ಬಾಲಕಿಯೊಂದಿಗೆ ಆರೋಪಿ ಸಲಿಗೆ ಬೆಳೆಸಿಕೊಂಡಿದ್ದರು ಎನ್ನಲಾಗಿದೆ. ಬಾಲಕಿಯ ವರ್ತನೆಯಲ್ಲಿ ಬದಲಾವಣೆ ಗಮನಿಸಿದ ತಾಯಿ ವಿಚಾರಣೆ ಸಂದರ್ಭದಲ್ಲಿ ವಿಷಯ ಗೊತ್ತಾಗಿದೆ. ನಂತರ ಠಾಣೆಗೆ ದೂರು ನೀಡಿದ್ದರು. ಬಾಲಕಿ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದ್ದು, ಆಕೆಯನ್ನು ಬಾಲ ಮಂದಿರಕ್ಕೆ ಕಳುಹಿಸಲಾಗಿದೆ. 

ಪೋಕ್ಸೊ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.