ADVERTISEMENT

ಚಾಮರಾಜನಗರದಲ್ಲಿ ಮಳೆ: ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದ ಸಚಿವ ಸೋಮಣ್ಣ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2022, 21:30 IST
Last Updated 4 ಆಗಸ್ಟ್ 2022, 21:30 IST
   

ಚಾಮರಾಜನಗರ: ಜಿಲ್ಲೆಯಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದ ತುರ್ತು ಹಾಗೂ ವಿಪತ್ತು ನಿರ್ವಹಣಾ ಕಾರ್ಯಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.

ದೂರವಾಣಿ ಮೂಲಕ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರಿಂದ ಜಿಲ್ಲೆಯ ಸ್ಥಿತಿಗತಿಗಳ ಬಗ್ಗೆ ಸಚಿವರು ಗುರುವಾರ ಮಾಹಿತಿ ಪಡೆದಿದ್ದಾರೆ.

ಮಳೆಯಿಂದ ಕೃಷಿ, ತೋಟಗಾರಿಕೆ ಬೆಳೆಹಾನಿ, ಜಾನುವಾರು, ಮನೆ ಮತ್ತು ಮೂಲ ಸೌಕರ್ಯಗಳಿಗೆ ಹಾನಿಯಾದಲ್ಲಿ ಸಮರೋಪಾದಿಯಲ್ಲಿ ಪರಿಸ್ಥಿತಿ ನಿಭಾಯಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.

ADVERTISEMENT

ಜಿಲ್ಲಾ ಹಾಗೂ ತಾಲೂಕುಮಟ್ಟದ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು, ಜನಸಾಮಾನ್ಯರ ಸಂಕಷ್ಟಗಳಿಗೆ ತುರ್ತಾಗಿ ಸ್ಪಂದಿಸುವಂತೆ ಅವರು ಸೂಚನೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.